ಬೆಂಗಳೂರು: ಹಾಲಿನ ದರ ಹೆಚ್ಚಳ ಮಾಡಿರುವ ಸರ್ಕಾರದ ಕ್ರಮವನ್ನು ವಿಪಕ್ಷ ಬಿಜೆಪಿ ಟೀಕಿಸಿದೆ. ಜನಸಾಮಾನ್ಯರ ಮೇಲೆ ಬರೆ ಎಳೆಯಲು ಹೊರಟಿರುವ ಸರ್ಕಾರಕ್ಕೆ ಕಿಂಚಿತ್ತೂ ಜನರ ಮೇಲೆ ಕನಿಕರ ಇಲ್ಲ. ಸ್ವಲ್ಪನಾದರೂ ಕನಿಕ ಇರುವುದೇ ಆದರೆ ಹಾಲಿನ ದರ ಏರಿಕೆಯ ಆದೇಶವನ್ನು ಹಿಂಪಡೆಯುವಂತೆ ಬಿಜೆಪಿ ಆಗ್ರಹಿಸಿದೆ.
ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕಾಂಗ್ರಸ್ ಸರ್ಕಾರ ನಂದಿನಿ ಹಾಲಿನ ದರವನ್ನ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಇದನ್ನು ಓದಿ : ಹಾಲಿನ ದರ ಹೆಚ್ಚಳ:ನಾಳೆಯಿಂದಲೇ ಪರಿಷ್ಕೃತ ದರ ಜಾರಿ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನ ಎರಡು ಬಾರಿ ಹೆಚ್ಚಿಸಿದ್ದಾರೆ. ಕಳೆದ ವರ್ಷ ಆಗಸ್ಟ್ ನಲ್ಲಿ 3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ ಈಗ ಮತ್ತೊಮ್ಮೆ 2 ರೂಪಾಯಿ ಹೆಚ್ಚಾಗಿದೆ. ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ.
ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಆರ್.ಅಶೋಕ್ ಹಾಲಿನ ದರ ಏರಿಕೆಯನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ಇದನ್ನು ನೋಡಿ : ಅಂಗನವಾಡಿಗಳ ಕತ್ತು ಹಿಸುಕಬೇಡಿ – ಕಾರ್ಯಕರ್ತರನ್ನು ತರಬೇತಿಗೊಳಿಸಿ Janashakthi Media