ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಡಾ ಭೂಮಿ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಬಿಜೆಪಿ ಮುಖಂಡರು ಮುತ್ತಿಗೆ ಹಾಕಲು ಯತ್ನಿಸಿದರು.
ಇದನ್ನೂ ಓದಿ: ಉತ್ತರಪ್ರದೇಶದ ಹತ್ರಾಸ್ನಲ್ಲಿ ಕಾಲ್ತುಳಿತಕ್ಕೆ 120ಕ್ಕೂ ಹೆಚ್ಚು ಮಂದಿ ಬಲಿ!
ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಿಪಕ್ಷ ನಾಯಕರಾದ ಆರ್.ಅಶೋಕ್, ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಾಲ್ಮೀಕಿ ಹಗರಣ ವಿಚಾರವಾಗಿ ಸಿಎಂ ಹಾಗೂ ಸಚಿವರಾದ ಶರಣು ಪ್ರಕಾಶ್ ಪಾಟೀಲ್ ಸೇರಿದಂತೆ ನಿಗಮದ ಹಲವು ಅಧಿಕಾರಿಗಳು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಅದೇ ರೀತಿ ಮುಡಾ & ವಾಲ್ಮೀಕಿ ನಿಗಮ ಪ್ರಕರಣವನ್ನು CBIಗೆ ವಹಿಸುವಂತೆ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಆರ್.ಅಶೋಕ್, ಮುಡಾದಲ್ಲಿ ಭಾರೀ ಹಗರಣ ನಡೆದಿದೆ. ಒಬ್ಬೊಬ್ಬರಿಗೆ 15 ಸೈಟ್ ಗಳನ್ನು ಹಂಚಿದ್ದಾರೆ. ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ. ಮಂಡ್ಯದಲ್ಲಿ ನಡೆದಿದ್ದ ನಿವೇಶನ ಹಂಚಿಕೆ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸಿದಂತೆ ಮುಡಾ ಅಕ್ರಮ ಕೇಸ್ ನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ನಿಗಮದಲ್ಲಿ ಅಕ್ರಮ, ಮುಡಾ ಅಕ್ರಮ ಸೇರಿದಂತೆ ಕಾಂಗ್ರೆಸ್ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈಗಾಗಲೇ ಸರ್ಕಾರದ ಒಂದು ವಿಕೆಟ್ ಪತನವಾಗಿದೆ. ಮತ್ತೊಂದು ದೊಡ್ಡ ವಿಕೆಟ್ ಪತನವಾಗುವವರೆಗೂ ನಾವು ಬಿಡಲ್ಲ. ಬಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕುವ ಮೂಲಕ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ನೋಡಿ: ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಹಿಂಸೆ ಮತ್ತು ದ್ವೇಷವನ್ನು ಹರಡುತ್ತಿದೆ – ರಾಹುಲ್ ಗಾಂಧಿ