ಹತ್ರಾಸ್ : ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ,ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಭೋಲೆ ಬಾಬಾ ಅವರ ಸತ್ಸಂಗದಲ್ಲಿ ಸ್ವಯಂ ಸೇವಕರಾಗಿ ಈ 6 ಮಂದಿ ಕೆಲಸ ಮಾಡಿದ್ದರು ಎಂದು ಐಜಿ (ಅಲಿಗಢ ವಲಯ) ಶಲಭ್ ಮಾಥುರ್ ಮಾಹಿತಿ ನೀಡಿದ್ದಾರೆ.
ಇದನ್ನುಓದಿ : ಕೆ ಕವಿತಾ, ಮನೀಶ್ ಸಿಸೋಡಿಯಾ ಗೆ ನ್ಯಾಯಾಂಗ ಬಂಧನ ವಿಸ್ತರಣೆ
ಮುಖ್ಯ ಸ್ವಯಂ ಸೇವಕ ದೇವಪ್ರಕಾಶ್ ಮಧುಕರ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗುವುದು. ಅಲ್ಲದೇ ಆತನ ಪತ್ತೆಗೆ ₹ 1 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫೂಲರಾಯ್ ಗ್ರಾಮದಲ್ಲಿ ಮಂಗಳವಾರ (ಜುಲೈ 2) ಆಯೋಜಿಸಿದ್ದ ಸತ್ಸಂಗದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 121 ಜನರು ಮೃತಪಟ್ಟಿದ್ದರು. ಇವರಲ್ಲಿ ಮಹಿಳೆಯರೇ ಹೆಚ್ಚು ಎಂದು ವರದಿಯಾಗಿದೆ.
ಇದನ್ನು ನೋಡಿ : NTA ಮಾಡಿದ ಎಡವಟ್ಟುಗಳು ಒಂದಲ್ಲ..! ಎರಡಲ್ಲ..!!Janashakthi Media