ಅಸ್ಸಾಂನಲ್ಲಿ ಭೀಕರ ಪ್ರವಾಹ; ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ 131 ಪ್ರಾಣಿಗಳ ಸಾವು

ದಿಸ್ಪುರ್: ಭೀಕರ ಪ್ರವಾಹದಿಂದಾಗಿ ಅಸ್ಸಾಂನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇಲ್ಲಿನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ  ಪ್ರವಾಹ ಪರಿಸ್ಥಿತಿ ಇನ್ನೂ ಘೋರವಾಗಿದ್ದು, ಸುಮಾರು 131 ಪ್ರಾಣಿಗಳು ಸಾವಿಗೀಡಾಗಿದ್ದು, 97 ಪ್ರಾಣಿಗಳನ್ನು ರಕ್ಷಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ 85 ಹಂದಿ, ಜಿಂಕೆ, ಎರಡು ಖಡ್ಗಮೃಗ, ಗೂಬೆ, ಮೊಲ, ಆನೆ ಮತ್ತು ಕಾಡು ಬೆಕ್ಕುಗಳನ್ನು ಅಧಿಕಾರಿಗಳು ರಕ್ಷಿಸಿದ್ದಾರೆ. ಸತ್ತ ಪ್ರಾಣಿಗಳಲ್ಲಿ ಆರು ಘೇಂಡಾಮೃಗಗಳು, 117 ಹಾಗ್​ ಜಿಂಕೆಗಳು ಸೇರಿವೆ, ಇದರಲ್ಲಿ 98 ನೀರಿನಲ್ಲಿ ಮುಳುಗಿ, ಚಿಕಿತ್ಸೆಯ ಸಮಯದಲ್ಲಿ 25 ವನ್ಯಜೀವಿಗಳು ಸಾವನ್ನಪ್ಪಿವೆ. ಪ್ರಸ್ತುತ, 25 ಪ್ರಾಣಿಗಳು ವೈದ್ಯಕೀಯ ಆರೈಕೆಯಲ್ಲಿದ್ದು, 52 ಪ್ರಾಣಿಗಳನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿ : ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಾಜಕಾಲುವೆಯಲ್ಲಿ ಕೊಚ್ಚಿಹೋದ ಡೆಲಿವರಿ ಬಾಯ್

ಭದ್ರತಾ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ನೌಕರರು ವನ್ಯಜೀವಿಗಳ ರಕ್ಷಣೆಗಾಗಿ ಗಸ್ತು ಬೋಟ್‍ಗಳ ಮೂಲಕ ಹುಡುಕಾಟ ನಡೆಸುತ್ತಿದ್ದಾರೆ. ಈ ಮೂಲಕ ವನ್ಯಜೀವಿಗಳ ರಕ್ಷಣೆಗಾಗಿ ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಂಡಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏತನ್ಮಧ್ಯೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೋಮವಾರ ಮಾತನಾಡಿ, ಅಸ್ಸಾಂನಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಜೊತೆಯಲ್ಲಿ ಪ್ರಾಣಿಗಳ ಮೇಲೆ ಸಮಾನವಾಗಿ ಪರಿಣಾಮ ಬೀರಿದೆ. ‘ಅಸ್ಸಾಂ ತಂಡವು ಎಲ್ಲರಿಗೂ ಸಹಾಯ ಮಾಡಲು ಹಗಲಿರುಳು ಶ್ರಮಿಸುತ್ತಿದೆ’ ಎಂದು ಹೇಳಿದ್ದಾರೆ. ಈ ವರ್ಷ ಮಾರ್ಚ್ 8 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಜಿರಂಗ ಪಾರ್ಕ್‍ನಲ್ಲಿ ಸಫಾರಿಗೆ ತೆರಳಿದ್ದರು.

ಇದನ್ನು ನೋಡಿ : ಮಳೆ ಹೆಚ್ಚಳ ಸಾಧ್ಯತೆ – ಸರ್ಕಾರ ಕಣ್ಮುಚ್ಚಿ ಕುಳಿತರೆ ಅಪಾಯ ಕಟ್ಟಿಟ್ಟ ಬುತ್ತಿJ

Donate Janashakthi Media

Leave a Reply

Your email address will not be published. Required fields are marked *