ಕುಡಿದು ವಾಹನ ಚಲಾಯಿಸಿದ 23 ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ 23 ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಬೆಳಗ್ಗೆ 7 ರಿಂದ 9 ರವರೆಗೆ ನಡೆಸಿದ ವಿಶೇಷ ಅಭಿಯಾನದಲ್ಲಿ ಒಟ್ಟು 3016 ಶಾಲಾ ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, 23 ಚಾಲಕರು ಮದ್ಯಪಾನ ಪರೀಕ್ಷೆಗೆ ಪಾಸಿಟಿವ್ ಎಂದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ ಎನ್ ಅನುಚೇತ್ ತಿಳಿಸಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯು ಹೆಣ್ಣು ಮಗುವನ್ನು ಬದಲಾಯಿಸಿ ಗಂಡು ಶಿಶುವನ್ನು ಮಾರಲು ಯತ್ನ; 4 ಮಂದಿ ಸೆರೆ

ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅವರ ಚಾಲನಾ ಪರವಾನಗಿಯನ್ನು ಆಯಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

“ಸ್ಪೆಷಲ್ ಡ್ರೈವ್ ಸಮಯದಲ್ಲಿ, 11 ವಾಹನಗಳು ಫಿಟ್ನೆಸ್ ಪ್ರಮಾಣಪತ್ರವಿಲ್ಲದೆ ಕಂಡುಬಂದಿವೆ, ಮುಂದಿನ ಅಗತ್ಯ ಕ್ರಮಕ್ಕಾಗಿ ಸಂಬಂಧಿಸಿದ ಆರ್‌ಟಿಓ ಗಳಿಗೆ ಹಸ್ತಾಂತರಿಸಲಾಗುವುದು. ವಿದ್ಯಾರ್ಥಿಗಳು ಮತ್ತು ಇತರ ರಸ್ತೆ ಬಳಕೆದಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಂತಹ ವಿಶೇಷ ಡ್ರೈವ್‌ಗಳು ನಿಯಮಿತವಾಗಿ ಮುಂದುವರೆಯುತ್ತವೆ” ಎಂದು ಅನುಚೇತ್ ಸೇರಿಸಿದ್ದಾರೆ.

ಇದನ್ನೂ ನೋಡಿ: ಮಕ್ಕಳಿಗೆ ವ್ಯಾಕರಣ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ Janashakthi Media

Donate Janashakthi Media

Leave a Reply

Your email address will not be published. Required fields are marked *