ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕ ಬಸನಗೌಡ ದದ್ದಲ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳ ಮನೆ, ಕಚೇರಿ, ಬ್ಯಾಂಕ್ ಸೇರಿದಂತೆ ಒಟ್ಟು 18 ಕಡೆ ಏಕಕಾಲಕ್ಕೆ ಜಾರಿ ನಿದೇರ್ಶನಾಲಯ ( ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಿನ್ನೆಯಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ವಾಲೀಕಿ ನಿಗಮ ಮಂಡಳಿ ಅಧ್ಯಕ್ಷ ಬಸನಗೌಡ ದದ್ದಲ್, ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದ ಮರುದಿನವೇ ಇಡಿ ದಾಳಿ ನಡೆಸಿದೆ.ಮೂಲಗಳ ಪ್ರಕಾರ ಈಗಾಗಲೇ ಬಿ.ನಾಗೇಂದ್ರ ಅವರನ್ನು ಇಡಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ವಾರ್ಡ್ ಸಂಖ್ಯೆ 2, ಆರ್‌ಆರ್ (ರಾಮ್ ರಹೀಮ್) ಕಾಲೊನಿಯಲ್ಲಿರುವ ದದ್ದಲ್ ಮನೆಯ ಮೇಲೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಬೆಳಗ್ಗೆ 7 ಗಂಟೆಯಿಂದ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಬಳ್ಳಾರಿಯ ನೆಹರು ಕಾಲೊನಿಯಲ್ಲಿರುವ ಬಿ.ನಾಗೇಂದ್ರ ಮನೆ ಮೇಲೂ ಬೆಳಗ್ಗೆ 3ರಿಂದ 4 ಅಧಿಕಾರಿಗಳಿದ್ದ ತಂಡ ದಾಳಿ ಮಾಡಿದೆ. ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ ಅಧಿಕಾರಿಗಳು, ನಾಗೇಂದ್ರರ ಮನೆಯಲ್ಲಿರುವ ದಾಖಲೆಗಳನ್ನೂ ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ : ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಸ್ಲೀಪರ್ ಕೋಚ್ ಬಸ್ – ಹಾಲಿನ ಟ್ಯಾಂಕರ್ ಡಿಕ್ಕಿ – 18 ಮಂದಿ ಸಾವು
ದಾಳಿಗೂ ಮುನ್ನ ಇಡಿ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಸಣ್ಣ ಸುಳಿವನ್ನು ಕೂಡ ನೀಡಿರಲಿಲ್ಲ. ಸಿಎಸ್‌ಎಫ್ ಭದ್ರತೆಯೊಂದಿಗೆ ಎಲ್ಲಾ ಕಡೆ ದಾಳಿ ನಡೆಸಲಾಗಿದೆ.ಮಾಜಿ ಸಚಿವ ನಾಗೇಂದ್ರ ಅವರ ಡಾಲರ್‌ರಸ ಕಾಲೋನಿಯಲ್ಲಿರುವ ರಾಮ್ಕಿ ಉತ್ಸವ್ ಫ್ಲಾಟ್ ಜೊತೆಗೆ ಅವರ ಆಸ್ತಿಗಳಿರುವ ಬಿಇಎಲ್ ರೋಡ್, ಮತ್ತಿಕೆರೆ ಹಾಗೂ ಮಲ್ಲೇಶ್ವರಂ ಸೇರಿದಂತೆ ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಲಾಗಿದೆ.
ಇಡಿ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ನಾಗೇಂದ್ರ ಮನೆಯಲ್ಲೇ ಇದ್ದರು. ಈ ವೇಳೆ ಕುಟುಂಬದ ಸಮುಖದಲ್ಲೇ ದಾಖಲೆಗಳನ್ನು ಪರಿಶೀಲಿಸಿ ಕೆಲವನ್ನು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಬಳ್ಳಾರಿಯ ಮನೆಯ ಮೇಲೂ ದಾಳಿ ನಡೆಸಲಾಗಿದೆ.
ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ರಾಮ್‌ರಹೀಮ್ ಕಾಲೋನಿಯ ಮನೆ ಮೇಲೆ ದಾಳಿ ಮಾಡಲಾಗಿದೆ. ಅದೇ ರೀತಿ ಬೆಂಗಳೂರಿನ ಯಲಹಂಕ, ಕೋರಮಂಗಲ, ಶಾಸಕರ ಭವನ, ವಾಲೀಕಿ ಮುಖ್ಯ ಕಚೇರಿ, ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.