270ಕ್ಕೂ ಹೆಚ್ಚು ನಕಲಿ ಖಾತೆ ತೆರೆದು ವಂಚನೆ: ಸೈಬರ್‌ ವಂಚಕರ ಬಂಧನ

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಬೃಹತ್ ಸೈಬರ್ ಜಾಲವೊಂದನ್ನು ಬೇದಿಸಿರುವ ಹುಬ್ಬಳ್ಳಿ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದಾರೆ. ವಂಚನೆಗೆ ಸಂಬಂಧಿಸಿದ ಡಿಜಿಟಲ್ ಸೇರಿದಂತೆ ಹಲವು ದಾಖಲೆಗಳನ್ನು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಸೈಬರ್‌ ಕ್ರೈಂ ಠಾಣೆ ಪೊಲೀಸರು, ದೆಹಲಿಯಲ್ಲಿ ಇಬ್ಬರು ಸಾಫ್ಟ್ ವೇರ್‌ ಎಂಜಿನಿಯರ್‌ಗಳು ಮತ್ತು ಮುಂಬೈಯಲ್ಲಿ ಬಟ್ಟೆ ವ್ಯಾಪಾರಿಯನ್ನು ಬಂಧಿಸಿ ಮೊಬೈಲ್‌, ಲ್ಯಾಪ್‌ಟಾಪ್‌ ಸೇರಿ ಕೆಲ ದಾಖಲೆಯನ್ನು ವಶಪಡಿಸಿಕೊಂಡು, ಕೆಲ ಬ್ಯಾಂಕ್‌ಗಳ ಖಾತೆಗಳನ್ನು ನಿಷ್ಕಿಯಗೊಳಿಸಿ 60 ಲಕ್ಷ ಬಳಕೆಯನ್ನು ತಡೆ ಹಿಡಿದಿದ್ದಾರೆ.

ದೆಹಲಿಯ ನಿಖಿಲಕುಮಾರ್‌ ರೌನಿ ಮತ್ತು ಸಚಿನ್‌ ಬೋಲಾ ಹಾಗೂ ಮುಂಬೈಯ ನಿಗಮ್‌ ಬಂಧಿತ ಆರೋಪಿಗಳು. ಮೂವರನ್ನು ಹುಬ್ಬಳ್ಳಿಗೆ ಕರೆ ತಂದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇಬ್ಬರು ಆರೋಪಿಗಳು ಸಾಫ್ಟ್ ವೇರ್‌ ಎಂಜಿನಿಯರ್‌ಗಳಾಗಿದ್ದು, ಡಾರ್ಕ್‌ನೆಟ್‌ಲ್ಲಿ ಸಕ್ರಿಯರಾಗಿ ಕೋಡಿಂಗ್‌ ಮತ್ತು ಡಿ-ಕೋಡಿಂಗ್‌ ಮಾಡುವಲ್ಲಿ ಪರಿಣಿತರು. ಈ ಹಿಂದೆ ಐಟಿ ಕಂಪನಿಯಲ್ಲಿ ಕೆಲಸ ಮಾಡಿ, ಹೊರಬಂದವರು. ಇನ್ನೊಬ್ಬ ಆರೋಪಿ ಬಟ್ಟೆ ವ್ಯಾಪಾರಿ. ಈ ಮೂವರು ಕರ್ನಾಟಕ ಸೇರಿ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮಹಾರಾಷ್ಟ್ರ, ಅಸ್ಸಾಂ, ಮಧ್ಯಪ್ರದೇಶ, ತಮಿಳುನಾಡು, ದೆಹಲಿ ಹಾಗೂ ಇತರ ರಾಜ್ಯಗಳಲ್ಲಿ ಸಂಪರ್ಕ ಜಾಲ ವಿಸ್ತರಿಸಿಕೊಂಡು, ಆನ್‌ಲೈನ್‌ ಮೂಲಕ ವಂಚಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿಕರ್ನಾಟಕ ರಾಷ್ಟ್ರೀಯ ಅಂತರರಾಷ್ಟ್ರೀಯ ಇತರೆ ವಿದ್ಯಮಾನ ಜಿಟಿ ಮಾಲ್‌ನಲ್ಲಿ ಅನ್ನದಾತನಿಗೆ ಅವಮಾನ : ಪಂಚೆ ಧರಿಸಿದ್ದಕ್ಕೆ ಮಾಲ್‌ ಒಳಗೆ ಬಿಡದ ಸಿಬ್ಬಂದಿ!

ಪ್ರಾಥಮಿಕ ಹಂತದ ತನಿಖೆ ಪ್ರಕಾರ, ಸಾರ್ವಜನಿಕರನ್ನು ವಂಚಿಸಿ ಗಳಿಸಿದ ಹಣವನ್ನು ಆರೋಪಿಗಳು ಸರ್ಕಾರಿ ಮತ್ತು ಖಾಸಗಿಯ ವಿವಿಧ ಬ್ಯಾಂಕ್ಗಳ 37 ಖಾತೆಗಳಿಗೆ ವರ್ಗಾಯಿ ಸಿಕೊಳ್ಳುತ್ತಿದ್ದರು. ಅದನ್ನು ದೇಶದ ವಿವಿಧ ಬ್ಯಾಂಕ್‌ಗಳಲ್ಲಿನ 270ಕ್ಕೂ ನಕಲಿ ಖಾತೆಗೆ ವರ್ಗಾಯಿಸಿಕೊಂಡು, ಡ್ರಾ ಮಾಡಿಕೊಳ್ಳುತ್ತಿದ್ದರು.

ಒಂದು ಖಾತೆಯಿಂದ ಮತ್ತೊಂದು ಖಾತೆಗೆ ಅಂದಾಜು ನೂರಾರು ಕೋಟಿಗೂ ಅಧಿಕ ಹಣ ವರ್ಗಾವಣೆಯಾದ ಬಗ್ಗೆ ಶಂಕೆಯಿದೆ.ಕೆಲ ದಿನಗಳ ಹಿಂದೆ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆಯಲ್ಲಿ ಆನ್‌ಲೈನ್‌ ವಂಚನೆ ಕುರಿತು ಪ್ರಕರಣ ದಾಖಲಾಗಿತ್ತು. ಅದರ ಜಾಡು ಹಿಡಿದ ಪೊಲೀಸರಿಗೆ, ವಂಚಕರ ಜಾಲ ದೇಶದೆಲ್ಲೆಡೆ ವಿಸ್ತರಿಸಿರುವುದು ಗೊತ್ತಾಯಿತು.

ಹಣ ವರ್ಗಾವಣೆಯಾದ ಬ್ಯಾಂಕ್‌, ಸ್ಥಳ, ಖಾತೆ ವಿವರ, ವಿಳಾಸ, ಮೊಬೈಲ್‌ ಸಂಪರ್ಕ ಸಂಖ್ಯೆ ಮಾಹಿತಿ ಕಲೆಹಾಕಿ, ವಿಚಾರಣೆ ತೀವ್ರಗೊಳಿಸಿದ್ದರು. ಆಗ ವಿವಿಧ ಬ್ಯಾಂಕ್‌ಗಳ ಖಾತೆಗಳಿಗೆ ಸಕಾರಣವಿಲ್ಲದೆ ಹಣ ವಹಿವಾಟು ಆಗಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಯಾರದ್ದೋ ಹೆಸರಲ್ಲಿರುವ ಬ್ಯಾಂಕ್‌ ಖಾತೆಗೆ ಇನ್ಯಾರದ್ದೋ ಹೆಸರಲ್ಲಿ ಇರುವ ಮೊಬೈಲ್‌ ನಂಬರ್‌ ಜೋಡಣೆ ಮಾಡಿದ್ದರು. ಬ್ಯಾಂಕ್‌ ಖಾತೆ ವಿಳಾಸ ಅಸ್ಸಾಂ ರಾಜ್ಯದ್ದಾಗಿದ್ದರೆ ಮೊಬೈಲ್‌ ಸಂಖ್ಯೆ ವಿಳಾಸ ಕರ್ನಾಟಕದ್ದಾಗಿರುವುದು ತನಿಖೆಯಿಂದ ಗೊತ್ತಾಗಿದೆ.

ಹೀಗೆ ಬೇರೆ ಬೇರೆ ರಾಜ್ಯಗಳ ನಿವಾಸಿಗಳ ಹೆಸರಲ್ಲಿ ಬ್ಯಾಂಕ್‌ಗಳಲ್ಲಿ ನಕಲಿ ಖಾತೆ ತೆರೆದು ಹಣ ವರ್ಗಾಯಿಸಿಕೊಂಡಿರುವುದು ಗೊತ್ತಾಗಿದೆ. 270ಕ್ಕೂ ಹೆಚ್ಚು ಬ್ಯಾಂಕ್‌ ಖಾತೆಗಳಿಂದ ಹಣ ವಹಿವಾಟು ನಡೆದಿದೆ. ಹೀಗಾಗಿ ಮೊತ್ತದ ಬಗ್ಗೆ ನಿಖರ ಮಾಹಿತಿ ಸಿಗುತ್ತಿಲ್ಲ ಎನ್ನಲಾಗಿದೆ.

Donate Janashakthi Media

Leave a Reply

Your email address will not be published. Required fields are marked *