ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡದ ಒಂದು ಭಾಗ ಕುಸಿತ; ಓರ್ವ ಮಹಿಳೆ ಮೃತ

ಮುಂಬೈ: ಕಳೆದ ಕೆಲ ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ಈ ನಡುವೆ ಮಹಾನಗರಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಭಾಗವೊಂದು ಕುಸಿದು ಬಿದ್ದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಮುಂಬೈಯಲ್ಲಿ ಶನಿವಾರ ಸಂಭವಿಸಿದೆ.

ಇಲ್ಲಿನ ಗ್ರಾಂಟ್ ರೋಡ್ ರೈಲು ನಿಲ್ದಾಣದ ಬಳಿ ಇರುವ ನಾಲ್ಕು ಅಂತಸ್ತಿನ ಕಟ್ಟಡದ ಒಂದು ಭಾಗ ಭಾರಿ ಮಳೆಯಿಂದ ಬಿರುಕುಗೊಂಡು ಬೆಳಗ್ಗೆ 10.30ರ ಸುಮಾರಿಗೆ ಕುಸಿದು ಬಿದ್ದ ಪರಿಣಾಮ ಕಟ್ಟಡ ಕೆಳಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಎಲ್ಲೆಲ್ಲೂ ಮಳೆಯ ಆರ್ಭಟ; ಕೆಆರ್‌ಎಸ್, ಹೇಮಾವತಿ, ಕಬಿನಿ ಡ್ಯಾಂ ಭರ್ತಿ

ಈ ಕುರಿತು ಮಾಹಿತಿ ನೀಡಿದ ಅಗ್ನಿಶಾಮಕ ಅಧಿಕಾರಿಗಳು ಕಟ್ಟಡದ ಭಾಗ ಕುಸಿದು ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸುವ ಕಾರ್ಯ ಪ್ರಗತಿಯಲ್ಲಿದೆ ಅಲ್ಲದೆ ಘಟನೆಗೆ ಸಂಬಂಧಿಸಿ ಇದುವರೆಗೆ ಕಟ್ಟಡದಲ್ಲಿದ್ದ ಹದಿಮೂರು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಹಳೆಯ ಕಟ್ಟಡವಾದ ಕಾರಣ ಅವಶೇಷಗಳು ಕುಸಿಯುವ ಹಂತದಲ್ಲಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಕಟ್ಟದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ಶುಕ್ರವಾರ ಭಾರೀ ಮಳೆಯಾಗಿದ್ದು ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡು ಬಸ್ ಸಂಚಾರ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಇದನ್ನೂ ನೋಡಿ: ಸಕ್ಕರೆ ಕಾಯಿಲೆ ಎದುರಿಸುವುದು ಹೇಗೆ ? ವೈದ್ಯರ ಜೊತೆ ಮಾತುಕತೆ

 

Donate Janashakthi Media

Leave a Reply

Your email address will not be published. Required fields are marked *