ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ: ಬಿ ನಾಗೇಂದ್ರಗೆ ಆಗಸ್ಟ್‌ 3ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಸೋಮವಾರ ಮಾಜಿ ಸಚಿವ ಬಿ. ನಾಗೇಂದ್ರ ರನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಅಭಿವೃದ್ಧಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಮಾಜಿ ಸಚಿವ ನಾಗೇಂದ್ರ ಅವರನ್ನು ಕಸ್ಟಡಿಗೆ ಪಡೆದಿತ್ತು.

ಇದನ್ನೂ ಓದಿ: ಸೂಕ್ಷ್ಮ ಸಂವೇದನೆ ಇಲ್ಲದ ಒಂದು ನಾಗರಿಕತೆಯಲ್ಲಿ

ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು(ಜುಲೈ 22) ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಬಿ.ನಾಗೇಂದ್ರ ಅವರನ್ನು ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ನಾಗೇಂದ್ರ ಪರಪ್ಪನ ಅಗ್ರಹಾರ ಜೈಲು ಪಾಲಾಗಲಿದ್ದಾರೆ.

ಏನಿದು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ?

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಎಸ್‌ಐಟಿ ಬಂಧಿಸಿದೆ.

ಹಗರಣ ಸಂಬಂಧ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ (ಜು.10) ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದರು. ನಿಗಮದ ಹಣ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮದ್ಯ ಖರೀದಿ ಮಾಡಿದ್ದಾರೆ. ಈ ಬಗ್ಗೆ ಬಸನಗೌಡ ದದ್ದಲ್​ ಮತ್ತು ನಾಗೇಂದ್ರ ನಿವಾಸದಲ್ಲಿ ಮಹತ್ವದ ದಾಖಲೆಗಳ ಪತ್ತೆಯಾಗಿವೆ ಎಂದು ಜಾರಿ ನಿರ್ದೇಶನಾಲಯದ ಪ್ರಕಟಣೆ ಮೂಲಕ ತಿಳಿಸಿತ್ತು.

ಈ ಎಲ್ಲ ಅಂಶಗಳನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗಮನದಲ್ಲಿ ಇಟ್ಟುಕೊಂಡು ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬಂಧಿಸಿದ್ದರು. ಇದೀಗ  ಬಿ. ನಾಗೇಂದ್ರ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಇದನ್ನೂ ನೋಡಿ: ಕನಿಷ್ಠ ವೇತನ, ಪಿಂಚಣಿಗೆ ಆಗ್ರಹಿಸಿ ಜುಲೈ 23 ರಂದು ಗ್ರಾಪಂ ನೌಕರರ ಹೋರಾಟJanashakthi Media

Donate Janashakthi Media

Leave a Reply

Your email address will not be published. Required fields are marked *