ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮೈಸೂರು ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ ಎಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಆರೋಪಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಪ್ಪು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ, ಕುಮಾರಸ್ವಾಮಿ ಯಾವ ರೀತಿ ನಿವೇಶನ ಪಡೆದಿದ್ದಾರೆ ಎಂಬುದರ ಬಗ್ಗೆ ಬೆಂಗಳೂರಿನಲ್ಲಿ ಶೀಘ್ರವೇ ದಾಖಲೆ ಬಿಡುಗಡೆ ಮಾಡುವೆ ಎಂದು ಹೇಳಿದರು.
ಜಮೀನಿನ ಮೂಲ ಮಾಲೀಕ ಬಿಜೆಪಿ ನಾಯಕರು ಎನ್ನುತ್ತಿರುವ ನಿಂಗ ಎಂಬುವರ ಮೊಮ್ಮಕ್ಕಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ದೂರು ಕೊಡಿಸಿದ್ದಾರೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಪ್ಪಿತಸ್ಥರು ಎಂದು ಬಿಂಬಿಸುವ ಪ್ರಯತ್ನ ಆಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ರಸ್ತೆಯಲ್ಲಿ ನಿಂತು ಮಾತನಾಡಿದ್ದಕ್ಕೆ ದಲಿತ ಯುವಕನ ಕೈ ಕಡಿದ ದುಷ್ಕರ್ಮಿಗಳು
ಬಿಜೆಪಿ, ಜೆಡಿಎಸ್ ನಾಯಕರ ಪಾಲಿದೆ
ಮುಡಾ ಹಗರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಪಾತ್ರವೇ ಹೆಚ್ಚಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲು ಕೂಡ ಇದೆ. ಸಂಬಂಧಿಕರ ಮುಖಾಂತರ ವಿಜಯೇಂದ್ರ ಅಕ್ರಮ ಎಸಗಿದ್ದಾರೆ ಎಂದು ದೂರಿದರು.
ಮೈಸೂರು, ಕೊಡಗು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ. ಜನರು ಸಂಕಷ್ಟಕ್ಕೆ ಸಿಲುಕಿರುವುದು ಸಂಸದರಿಗೆ ತಿಳಿದಿಲ್ಲವೇ? ಎಂದು ಪ್ರಶ್ನಿಸಿದರು.
ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಯದುವೀರ್ ಅವರಿಗೆ 65 ಸಾವಿರ ಮತಗಳು ಬಂದಿವೆ. ಆ ಭಾಗದಲ್ಲಿಯೂ ಅಭಿವೃದ್ಧಿಗೆ ಗಮನಹರಿಸಬೇಕು. ನಮ್ಮ ಸರಕಾರ ಇದ್ದಾಗ ನರ್ಮ್ ಯೋಜನೆಯಡಿ 2 ಸಾವಿರ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿಸಿದ್ದೆವು. ನೀವು ಅಭಿವೃದ್ಧಿಯತ್ತ ಗಮನ ಕೊಡಬೇಕು ಎಂದು ಹೇಳಿದರು.
ಇದನ್ನೂ ನೋಡಿ: ಪಿಚ್ಚರ್ ಪಯಣ – 146 : ‘ಬ್ಲಿಂಕ್’ ಚಿತ್ರ ಚರ್ಚೆ – ಟೈಮ್ ಟ್ರಾವೆಲ್ ಸಿನಿಮಾJanashakthi Media