ಕೇಂದ್ರ ಸರ್ಕಾರಕ್ಕೆ ಸಡ್ಡು : ಪ್ರಮುಖ ಮೂರು ನಿರ್ಣಯಗಳ ಅಂಗೀಕಾರ

ಬೆಂಗಳೂರು : ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆಯುವಂತಹ ಪ್ರಮುಖ ಮೂರು ನಿರ್ಣಯಗಳನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದು, ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌‍ ಸದಸ್ಯರ ಧರಣಿ, ಸತ್ಯಾಗ್ರಹದ ನಡುವೆಯೂ ರಾಜ್ಯ ಸರ್ಕಾರ ಈ ನಿರ್ಣಯವನ್ನು ಮಂಡಿಸಿದೆ. ಒಂದು ದೇಶ-ಒಂದು ಚುನಾವಣೆಯನ್ನು ವಿರೋಧಿಸುವ, ನೀಟ್‌ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಲು ಆಗ್ರಹಿಸುವ, ಲೋಕಸಭೆ ಹಾಗೂ ವಿಧಾನಸಭೆಗಳ ಕ್ಷೇತ್ರ ವಿಂಗಡಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡುವ ಮೂರು ಪ್ರಮುಖ ನಿರ್ಣಯಗಳು ಹಾಗೂ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಅರಣ್ಯ ಸಂರಕ್ಷಣಾ ಕಾಯ್ದೆಯಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸುವ ನಾಲ್ಕನೇ ನಿರ್ಣಯವನ್ನು ಮಂಡಿಸಲಾಯಿತು.
ಈ ಮಂಡನೆಗಳು ಸರ್ವಾನುಮತದಿಂದ ಅಂಗೀಕಾರಗೊಂಡಿವೆ ಎಂದು ವಿಧಾನಸಭಾಧ್ಯಕ್ಷರು ಯು.ಟಿ.ಖಾದರ್‌ ಅವರು ಪ್ರಕಟಿಸಿದರು. ಒಂದು ದೇಶ- ಒಂದು ಚುನಾವಣೆ ನಿರ್ಣಯಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿ, ಸರ್ವಾನುಮತದ ಅಂಗೀಕಾರವನ್ನು ಆಕ್ಷೇಪಿಸಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌, 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದು. ಕೇಂದ್ರ  

ಇದನ್ನು ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನು ಆಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.

ಆರಂಭದಲ್ಲಿ ಮಾತನಾಡಿದ ಸಚಿವ ಹೆಚ್‌.ಕೆ.ಪಾಟೀಲ್‌, ರಾಜ್ಯ ಮತ್ತು ದಕ್ಷಿಣ ಭಾರತದ ಜನರ ರಕ್ಷಣೆಗಾಗಿ ಪ್ರಜಾಪ್ರಭುತ್ವದಲ್ಲಿ ಸೂಕ್ತ ಸ್ಥಾನಮಾನ ನಿಗದಿಯಾಗಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಅಂಗೀಕಾರ ಮಾಡಬೇಕಾಗಿದೆ. ಶಾಂತ ಚಿತ್ತರಾಗಿ ಚರ್ಚೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು. ಆದರೆ ವಿರೋಧ ಪಕ್ಷದ ಸದಸ್ಯರು ಅದಕ್ಕೆ ಕಿವಿಗೊಡಲಿಲ್ಲ.

ನಿರ್ಣಯ ಮಂಡನೆ ಆಗುತ್ತಿದ್ದಂತೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನಾವು ಈ ನಿರ್ಣಯದ ಪರವಾಗಿದ್ದೇವೆ. ಚರ್ಚೆಯಲ್ಲಿ ಭಾಗವಹಿಸುತ್ತೇವೆ ಎಂದು ಪ್ರತಿಪಾದಿಸಿದರು. ಹಾಗಿದ್ದ ಮೇಲೆ ಧರಣಿ ಕೈ ಬಿಟ್ಟು ಚರ್ಚೆಯಲ್ಲಿ ಭಾಗವಹಿಸಿ ಎಂದು ಸಭಾಧ್ಯಕ್ಷರು ಸಲಹೆ ನೀಡಿದರು.

ವಿರೋಧ ಪಕ್ಷಗಳ ಸದಸ್ಯರು ಧರಣಿ ಮುಂದುವರೆಸಿದ್ದರಿಂದ ಸಭಾಧ್ಯಕ್ಷರು ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು.

ಇದನ್ನು ನೋಡಿ : ಕನಿಷ್ಠ ವೇತನ, ಪಿಂಚಣಿಗೆ ಆಗ್ರಹಿಸಿ ಗ್ರಾಪಂ ನೌಕರರ ಅನಿರ್ದಿಷ್ಟ ಹೋರಾಟ Janashakthi Media

Donate Janashakthi Media

Leave a Reply

Your email address will not be published. Required fields are marked *