ಕಲಬುರಗಿ : ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ

ಕಲಬುರಗಿ : ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿರುವ ಹಿನಾಯ ಘಟನೆ ನಡೆದಿದೆ.

ಕರ್ನಾಟಕದಲ್ಲಿ ಇತ್ತೀಚೆಗೆ ದಿನನಿತ್ಯ ಒಂದಲ್ಲೊಂದು ಕ್ರೈಮ್​ಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಲಬುರಗಿಯಲ್ಲಿ ಇದೀಗ ಮತ್ತೊಂದು ಭೀಕರ ಕೃತ್ಯ ನಡೆದಿದ್ದು, ಒಂದೂವರೆ ವರ್ಷದ ಹಸುಗೂಸಿನ ಮೇಲೆಯೇ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನು ಓದಿ : ವಿಧಾನಸಭೆ; ನೀಟ್‌ ಪರೀಕ್ಷೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರ

ಮಗುವಿನ ಎರಡು ಭಾಗದಲ್ಲಿ ವಿಕೃತಿ ಮೆರೆದಿರುವಂತಹ ಕುರುಹುಗಳು ಸಹ ಪತ್ತೆಯಾಗಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದೆ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಕೊಲೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಮನುಷತ್ಯ, ಮಾನವೀಯತೆಯನ್ನೇ ಮನುಷ್ಯ ಜೀವಿ ಕಳೆದುಕೊಂಡು ವಿಕೃತಿಯೆಡೆಗೆಸಾಗುತ್ತಿರುವಂತಿದೆ.

ಇದನ್ನು ನೋಡಿ : ಬಲವಂತದ ಭೂಸ್ವಾಧೀನ ವಿರೋಧಿಸಿ ಹೋರಾಟ : ಸಿಎಂ ಮನೆಗೆ ಹೊರಟಿದ್ದ ರೈತರ ಮೇಲೆ ಪೋಲಿಸ್ ದೌರ್ಜನ್ಯJanashakthi Media

Donate Janashakthi Media

Leave a Reply

Your email address will not be published. Required fields are marked *