ಚೇಳೂರು : ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಿಸಲು ವಿದ್ಯಾರ್ಥಿಗಳಿಂದ ಪತ್ರ ಚಳುವಳಿ

ಚೇಳೂರು: ಚೇಳೂರು ತಾಲ್ಲೂಕಿನಲ್ಲಿ ಹಾಸ್ಟೆಲ್ ಗಳ ಸಂಖ್ಯೆಯನ್ನು ಹೆಚ್ಚಿಸಲು ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು  ಪತ್ರ ಚಳುವಳಿ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಎಸ್‌ಎಫ್‌ಐ ರಾಜ್ಯಕಾರ್ಯದರ್ಶಿ ಭೀಮನಗೌಡ ಮಾತನಾಡಿ,  ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲ್ಲೂಕಿನಲ್ಲಿ ಶೈಕ್ಷಣಿಕ ಸವಾಲುಗಳನ್ನು ದಿನಂಪ್ರತೀ ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಚೇಳೂರು ನಗರದಲ್ಲಿ ಒಂದು ಸರ್ಕಾರಿ ಪ್ರೌಡ ಶಾಲೆ, ಮೂರು ಅನುದಾನಿತ ಶಾಲೆಗಳು, ನಾಲ್ಕು ಖಾಸಗಿ ಶಾಲೆಗಳು ಇವೆ. ಹಾಗೆಯೇ ಒಂದು ಸರ್ಕಾರಿ ಮತ್ತು ಒಂದು ಖಾಸಗಿ ಪಿಯು ಕಾಲೇಜು ಇವೆ. ಒಟ್ಟು ಅಂದಾಜು 2000 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಇವುಗಳಲ್ಲಿ ಬಹುತೇಕ ವಿದ್ಯಾರ್ಥಿಗಳು 20 ಕಿ.ಮೀ ಗಿಂತಲೂ ಹೆಚ್ಚಿನ ದೂರದ ಹಾಗೂ ಸಂಪರ್ಕರಹಿತ ಹಳ್ಳಿಗಳಿಂದ ಪ್ರಯಾಣಿಸಿ ಶಾಲಾ ಕಾಲೇಜುಗಳಿಗೆ ಹಾಜರಾಗಿ ಅಧ್ಯಯನ ಮಾಡುತ್ತಿದ್ದಾರೆ ಎಂದರು.

ಇಡೀ ತಾಲ್ಲೂಕಿನಲ್ಲಿ ಕೇವಲ ಒಂದು ಹಿಂದುಳಿದ ವರ್ಗದ ಬಾಲಕರ ಮೆಟ್ರಿಕ್ ಪೂರ್ವ ಹಾಗೂ ವಿದ್ಯಾರ್ಥಿನಿಯರ ಮೆಟ್ರಿಕ್ ನಂತರದ ಹಾಸ್ಟೆಲ್ ಇದೆ. ಅವುಗಳಲ್ಲಿಯೂ ವಿದ್ಯಾರ್ಥಿಗಳ ಸಂಖ್ಯೆಯನ್ನು ನಿಯಮಿತ ಗೊಳಿಸಲಾಗಿದೆ. ಹಾಗಾಗಿ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು ಹಾಸ್ಟಲ್ ನಲ್ಲಿ ನೆಲೆಸಲು ಸಾಧ್ಯವಾಗುತ್ತಿಲ್ಲ ಇದರಿಂದ ನೂರಾರು ಸಂಖ್ಯೆಯ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹಾಜರಾಗಲು ಸಾದ್ಯವಾಗದೇ ಶೈಕ್ಷಣಿಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಇದನ್ನು ಓದಿ : ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಗೆ ಹೊಸದಾಗಿ ಗುತ್ತಿಗೆದಾರರ ನೇಮಕ

ಅಷ್ಟೇ ಅಲ್ಲದೇ ಸಾಮಾಜಿಕವಾಗಿ ಅತೀ ಹಿಂದುಳಿದ ಹಾಗೂ ಬಡತನ ರೇಖೆಗಿಂತ ಕಡಿಮೆ ಇರುವ ನೂರಾರು ವಿದ್ಯಾರ್ಥಿನಿಯರು ಸರಿಯಾದ ಸಮಯಕ್ಕೆ ಶಾಲಾ- ಕಾಲೇಜುಗಳಿಗೆ ಹಾಜರಾಗಬೇಕು ಎನ್ನುವ ಕಾರಣಕ್ಕೆ ಇರುವ ನಿಗದಿತ ಬಸ್ ಗಳಲ್ಲಿ ಹೋಗಬೇಕು ಎನ್ನುವ ಕಾರಣಕ್ಕೆ ಬೆಳಗ್ಗೆಯ ತಿಂಡಿ ಹಾಗೂ ಮದ್ಯಾಹ್ನದ ಊಟವನ್ನು ಸೇವಿಸಲು ಸಾಧ್ಯವಾಗದ ಕಾರಣ ರಕ್ತಸ್ರಾವ ಮತ್ತು ಅಪೌಷ್ಟಿಕತೆಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿದೆ.

ರಾಜ್ಯದ ಮುಖ್ಯಮಂತ್ರಿಗಳಾದ ತಾವುಗಳು ಮೇಲೆ ತಿಳಿಸಿದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಚೇಳೂರು ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿನಿಲಯಗಳನ್ನು ಹಾಗೂ ಹಿಂದುಳಿದ ವರ್ಗದ ಇಲಾಖೆಯಿಂದ ಬಾಲಕರ ಹಾಗೂ ಬಾಲಕಿಯರ ಮೆಟ್ರಿಕ್ ನಂತರದ ಹಾಸ್ಟೆಲ್ ಗಳನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆರಂಭಿಸಬೇಕೆಂದು ಎಸ್‌ಎಫ್‌ಐ ಆಗ್ರಹಿಸಿದೆ.

ಇದನ್ನು ನೋಡಿ : IRB ಕಂಪನಿ ಕರ್ಮಕಾಂಡ : ರಸ್ತೆಗಳ ತುಂಬೆಲ್ಲ ಗುಂಡಿಗಳುJanashakthi Media

Donate Janashakthi Media

Leave a Reply

Your email address will not be published. Required fields are marked *