ಪೊಲೀಸರ ಕರ್ತವ್ಯಕ್ಕೆ ಅಡ್ಡಿ : ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು:  ಬಸವೇಶ್ವರನಗರದಲ್ಲಿರುವ ವಿಜಯನಗರ ಉಪವಿಭಾಗದ ಎಸಿಪಿಯವರ ಕಚೇರಿ ಮುಂದೆ ಅಕ್ರಮವಾಗಿ ಗುಂಪುಗೂಡಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಕಸ್ಟಡಿಯಲ್ಲಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನ ಹಿಂಸಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ಸೇರಿದಂತೆ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪದಡಿ ಬಿಜೆಪಿ ನಾಯಕರಾದ ಪ್ರತಾಪ್ ಸಿಂಹ, ಹರೀಶ್ ಪೂಂಜಾ ಸೇರಿದಂತೆ ಪುನೀತ್ ಕೆರೆಹಳ್ಳಿ ಮತ್ತಿತರರ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಆಮದಾಗುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸ ಮಿಶ್ರಿತವಾಗಿದೆ ಎಂದು ಆರೋಪಿಸಿದ್ದ ಪುನೀತ್ ಕೆರೆಹಳ್ಳಿ ನೇತೃತ್ವದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಸದಸ್ಯರು ಪುನೀತ್​ ಕೆರೆಹಳ್ಳಿ, ಜುಲೈ 26ರಂದು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಮಾಂಸದ ಬಾಕ್ಸ್​ಗಳನ್ನು ತಡೆದು ಪ್ರತಿಭಟಿಸಿದ್ದರು.

ಇದನ್ನೂ ಓದಿ: `SC-ST’ ಒಳಮೀಸಲಾತಿಗೆ `ಸುಪ್ರೀಂಕೋರ್ಟ್’ ಗ್ರೀನ್ ಸಿಗ್ನಲ್

ಈ ವೇಳೆ, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುನೀತ್ ಕೆರೆಹಳ್ಳಿಯವರನ್ನ ಕಾಟನ್ ಪೇಟೆ ಠಾಣಾ ಪೊಲೀಸರು ಬಂಧಿಸಿದ್ದರು.

ಪೊಲೀಸರ ವಶದಲ್ಲಿದ್ದ ಪುನೀತ್ ಕೆರೆಹಳ್ಳಿಯನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂಬ ಆರೋಪ ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಕುಮಾರ್ ವಿರುದ್ಧ ಕೇಳಿ ಬಂದಿತ್ತು. ಪೊಲೀಸರ ನಡೆಯನ್ನ ಖಂಡಿಸಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಾಪ್ ಸಿಂಹ ನೇತೃತ್ವದಲ್ಲಿ ಬಸವೇಶ್ವರ ನಗರ ಠಾಣೆ ಬಳಿಯಿರುವ ವಿಜಯನಗರ ಉಪವಿಭಾಗದ ಎಸಿಪಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ನೋಡಿ: ವಿವಿಧತೆಯಲ್ಲಿ ಏಕತೆ ಕಾಣುವುದೇ ಭಾರತೀಯತೆ – ಶೈಲಜ ಟೀಚರ್ Janashakthi Media

Donate Janashakthi Media

Leave a Reply

Your email address will not be published. Required fields are marked *