ವೈಫಲ್ಯ ಮುಚ್ಚಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ : ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು ; ಜೆಡಿಎಸ್- ಬಿಜೆಪಿ ಪಕ್ಷಗಳು ತಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಪಾದಯಾತ್ರೆ ನಡೆಸಿ ಜನರ ಗಮನವನ್ನು ಬೇರೆಡೆ ಸೆಳೆಯುತ್ತಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ನೆರೆ ಹಾವಳಿಯನ್ನು ವೀಕ್ಷಿಸಿ ಮಾತನಾಡಿದ ಅವರು, ಇವರ ವೈಲ್ಯ ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯುವ ಯತ್ನ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರು ನಮ ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸಲಿ ಸಾಕು ನಾನು ಅವರ ಕೈಮುಗಿಯುತ್ತೇನೆ. ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಇದೆ. ಕುಮಾರಸ್ವಾಮಿ ಅವರು ಮಂತ್ರಿಯಾಗಿದ್ದಾರೆ ರಾಜ್ಯದ ಜನತೆ ನಿಮಗೆ ಅಧಿಕಾರ ನೀಡಿದ್ದು ದ್ವೇಷ ರಾಜಕಾರಣ ಮಾಡಲೋ ರಾಜ್ಯಕ್ಕೆ ಉಪಕಾರ ಮಾಡು ವುದಕ್ಕೋ ಎಂದು ಪ್ರಶ್ನಿಸಿದರು.

ಇದನ್ನೂ ಓದಿಕರ್ನಾಟಕ ರಾಷ್ಟ್ರೀಯ ಅಂತರರಾಷ್ಟ್ರೀಯ ಇತರೆ ವಿದ್ಯಮಾನ ವರ್ಷ ಪೂರೈಸಿದ ಗೃಹಜ್ಯೋತಿ ಯೋಜನೆ!

ಬಿಜೆಪಿ-ಜೆಡಿಎಸ್ ಒಟ್ಟಾಗಿ ಆಪರೇಷನ್ ಮಾಡಿ ಜನರಿಂದ ಆಯ್ಕೆಯಾದ ಸರ್ಕಾರವನ್ನು ಬೀಳಿಸೋ ಪುರುಷಾರ್ಥಕ್ಕೆ ಜನ ಇವರನ್ನು ಆಯ್ಕೆ ಮಾಡಿ ಕಳಿಸಿರೋದು, ಸರ್ಕಾರ ಬೀಳಿಸೋದನ್ನೇ ಇವರು ರಾಜ್ಯದ ಅಭಿವೃದ್ಧಿ ಎಂದು ತಿಳಿದಿರುವ ಹಾಗಿದೆ. ಸರ್ಕಾರ ಬೀಳಿಸುವುದು, ಎತ್ತುವುದು ಜನ ಮಾಡುತ್ತಾರೆ. ಸರ್ಕಾರ ಬೀಳಿಸುವುದೇ ನಿಮ್ಮ ಸಾಧನೆಯೇ, ನಿಮ್ಮ ಸಾಧನೆ ಕೊಡುಗೆಗಳನ್ನು ಹೇಳಿ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಮುಚ್ಚಿಹಾಕಲು ಗಿಮಿಕ್ ನಾಟಕಗಳನ್ನು ಮಾಡುತ್ತಿದ್ದಾರೆ. ಮೇಕೆದಾಟು, ಭದ್ರಾ ಮೇಲ್ದಂಡೆ, ಯೋಜನೆ ಬರಬೇಕಾದ ಅನುದಾನ ಕೊಡಿಸುವ ಕೆಲಸ ಮಾಡಿ ಎಂದು ಒತ್ತಾಯಿಸಿದರು.

 

Donate Janashakthi Media

Leave a Reply

Your email address will not be published. Required fields are marked *