ಚೆನ್ನೈ: ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದಿರುವಂತಹ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯ ಎಡಪ್ಪಾಡಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಪೊಲೀಸ್ ಠಾಣೆಗೆ ಬಂದಿದ್ದ ಇಬ್ಬರು ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ. ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ : ಆಗಸ್ಟ್ 12ರವರೆಗೆ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ
ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ತಕ್ಷಣ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಪೆ
ಈಚೆಗೆ ಚೆನ್ನೈನ ರಾಜಭವನದ ಮುಖ್ಯದ್ವಾರಕ್ಕೆ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದ. ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು.
ಇದನ್ನು ನೋಡಿ : ‘ಪಾದಯಾತ್ರೆ ರಾಜಕಾರಣ’ ಸುತ್ತ ಮುತ್ತJanashakthi Media