ಬಾಬಾ ರಾಮದೇವ್​ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು​ ರದ್ದು ಮಾಡಿದ ಸುಪ್ರೀಂ ಕೋರ್ಟ್

ವದೆಹಲಿ: ಸುಪ್ರೀಂ ಕೋರ್ಟ್ ದಾರಿ ತಪ್ಪಿಸುವ ಜಾಹೀರಾತುಗಳ ಮೇಲೆ ಪತಂಜಲಿ ಕಂಪನಿ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮದೇವ್​ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು​ ರದ್ದು ಮಾಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮದೇವ್​ ಈ ಹಿಂದೆ ನ್ಯಾಯಾಲಯದ ಮುಂದೆ ಕ್ಷಮೆಯಾಚಿಸಿದ್ದರು. ಬಾಬಾ

ನ್ಯಾಯಾಂಗ ನಿಂದನೆ ಪ್ರಕರಣ ಪತಂಜಲಿ ಕಂಪನಿಯ ಸಂಸ್ಥಾಪಕ ಬಾಬಾ ರಾಮದೇವ್​ ಮತ್ತು ಕಂಪನಿಯ ಸಿಇಒ ಹಾಗೂ ಚೇರ್ಮನ್​ ಆಚಾರ್ಯ ಬಾಲಕೃಷ್ಣ ಇಬ್ಬರ ವಿರುದ್ಧವೂದಾಖಲಾಗಿತ್ತು. ನಾವು ಇನ್ನು ಮುಂದೆ ದಾರಿತಪ್ಪಿಸುವ ಯಾವುದೇ ಜಾಹೀರಾತುಗಳನ್ನು ಪ್ರಚಾರ ಮಾಡುವುದಿಲ್ಲ ಎಂದು ನ್ಯಾಯಾಯಲಕ್ಕೆ ಮುಚ್ಚಳಿಕೆ ಬರೆದುಕೊಟ್ಟ ಹಿನ್ನೆಲೆಯಲ್ಲಿ ಪ್ರಕರಣವನ್ನು ಉನ್ನತ ನ್ಯಾಯಾಲಯ ರದ್ದು ಮಾಡಿದೆ.

ಇದಕ್ಕೂ ಮುನ್ನ ಅಂದರೆ ಮಾರ್ಚ್​ 21ರಂದು ಪತಂಜಲಿ ಕಂಪನಿಯ ಮ್ಯಾನೇಜಿಂಗ್​ ಡೈರೆಕ್ಟರ್​ ಆಚಾರ್ಯ ಬಾಲಕೃಷ್ಣ, ಸುಪ್ರೀಂಕೋರ್ಟ್​ಗೆ ಅಫಿಡೆವಿಟ್​ ಸಲ್ಲಿಸಿ, ತಮ್ಮ ತಪ್ಪು ಜಾಹಿರಾತುಗಳ ಬಗ್ಗೆ ಪಶ್ಚಾತಾಪ ವ್ಯಕ್ತಪಡಿಸಿ, ಕ್ಷಮೆಯಾಚಿಸಿದರು. ಆಯುರ್ವೇದದ ಮೂಲಕ ಜೀವನಶೈಲಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಪರಿಹಾರಗಳನ್ನು ಒದಗಿಸುವ ಮೂಲಕ ದೇಶದ ಆರೋಗ್ಯ ಮೂಲಸೌಕರ್ಯದ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ನಮ್ಮ ಪತಂಜಲಿ ಕಂಪನಿಯ ಅನ್ವೇಷಣೆಯಾಗಿದೆ ಎಂದು ಸ್ಪಷ್ಟಪಡಿಸಿದ ಬಾಲಕೃಷ್ಣ, ಭವಿಷ್ಯದಲ್ಲಿ ಇಂತಹ ತಪ್ಪು ಜಾಹೀರಾತುಗಳನ್ನು ಪ್ರಕಟಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಾದ ಬಳಿಕ ರಾಮದೇವ್​ ಕೂಡ ಕೋರ್ಟ್​ ಮುಂದೆ ಕ್ಷಮೆಯಾಚಿಸಿದ್ದರು. ಇದೀಗ ಮುಚ್ಚಳಿಕೆ ಬರೆದುಕೊಟ್ಟ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ರದ್ದಾಗಿದೆ.

ಇದನ್ನೂ ಓದಿ: ಆ.14 ರಿಂದ 20 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ: ಸಚಿವ ಕೃಷ್ಣ ಬೈರೇಗೌಡ

ತನ್ನ ಜಾಹೀರಾತುಗಳಲ್ಲಿ ಅಲೋಪತಿ ವಿರುದ್ಧ ಪತಂಜಲಿ ಕಂಪನಿ ತಪ್ಪು ಮಾಹಿತಿ ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸುಪ್ರೀಂಕೋರ್ಟ್​ಗೆ ಅರ್ಜಿ ದಾಖಲಿಸಿತ್ತು. ಈ ಸಂಬಂಧ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಹೀರಾತುಗಳ ವಿರುದ್ಧ ಆದೇಶ ಹೊರಡಿಸಿತ್ತು. ಆದಾಗ್ಯೂ ಆದೇಶವನ್ನು ಪತಂಜಲಿ ಉಲ್ಲಂಘಿಸಿತ್ತು. ಇದರಿಂದ ಆಕ್ರೋಶಗೊಂಡ ನ್ಯಾಯಾಲಯ ನ್ಯಾಯಾಂಗ ನಿಂದನೆ ನೋಟಿಸ್​ ನೀಡಿ, ಉತ್ತರಿಸುವಂತೆ ತಾಕೀತು ಮಾಡಿತ್ತು. ಅಲ್ಲದೆ, ದಾರಿತಪ್ಪಿಸುವ ಜಾಹೀರಾತುಗಳನ್ನು ಸಹಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಅಮಾನುಲ್ಲಾ ಅವರು ಖಡಕ್​ ಎಚ್ಚರಿಕೆ ನೀಡಿದ್ದರು.

ಯೋಗದ ಸಹಾಯದಿಂದ ಮಧುಮೇಹ ಮತ್ತು ಅಸ್ತಮಾವನ್ನು ಸಂಪೂರ್ಣವಾಗಿ ಗುಣಪಡಿಸುವುದಾಗಿ ಪತಂಜಲಿಯು ಎಂದು ಹೇಳಿಕೊಂಡಿದೆ. ಅಲ್ಲದೆ, ತನ್ನ ಕಂಪನಿಯ ಉತ್ಪನ್ನಗಳನ್ನು ಬಳಸಿದರೆ ನಿರ್ದಿಷ್ಟ ಕಾಯಿಲೆ ಗುಣವಾಗುತ್ತದೆ ಎಂದು ಸಹ ಪತಂಜಲಿ ಹೇಳಿಕೊಂಡಿತ್ತು. ಅಲ್ಲದೆ, ಆಲೋಪತಿ ಚಿಕಿತ್ಸಾ ವಿಧಾನದ ಬಗ್ಗೆ ತಪ್ಪು ಮಾಹಿತಿ ಹರಡಿದ್ದರಿಂದ ಭಾರತೀಯ ವೈದ್ಯಕೀಯ ಸಂಘ ಕೋರ್ಟ್​ ಮೆಟ್ಟಿಲೇರಿತ್ತು. 

ಇದನ್ನೂ ನೋಡಿ: “ನಮ್ಮ ಭೂಮಿಯನ್ನು ವಿಮಾನ ನಿಲ್ದಾಣಕ್ಕೆ ಕೊಡಲ್ಲ” ಭೂಸ್ವಾಧೀನಕ್ಕೆ ರೈತರ ವಿರೋಧJanashakthi Media

Donate Janashakthi Media

Leave a Reply

Your email address will not be published. Required fields are marked *