ಪ್ರಗತಿಪರ ಚಿಂತಕ ಪ್ರೊ.ಬಿ.ಪಿ ಮಹೇಶ್‌ ಚಂದ್ರ ಗುರು ನಿಧನ

ಮೈಸೂರು : ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ‌ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಹಾಗೂ ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರ ಗುರು ಅವರು ಶನಿವಾರ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ‌ 68 ವರ್ಷದ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಸಂಜೆ 7.30 ರ ಸುಮಾರಿಗೆ ಹೃದಯಘಾತದಿಂದ ನಿಧನರಾಗಿದ್ದಾರೆ.

ಹೈದರಬಾದ್‌ನಲ್ಲಿ ಸಾರ್ವಜನಿಕ ಸಂಪರ್ಕಧಿಕಾರಿಯಾಗಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ ಪ್ರೊ.ಮಹೇಶ್‌ ಚಂದ್ರಗುರು ಬಳಿಕ ಮಂಗಳೂರು ವಿ.ವಿಯ ಪತ್ರಿಕೋದ್ಯಮ ಪ್ರಾಧ್ಯಾಪಕರಾದರು. ನಂತರ ಮೈಸೂರು ವಿವಿಗೆ ವರ್ಗಾವಣೆಗೊಂಡು ವಿವಿಯ ಪತ್ರಿಕೋದ್ಯಮ ವಿಭಾಗದಲ್ಲಿ ಹಲವಾರು ಕಾರ್ಯಗಳನ್ನು ಕೈಗೊಂಡರು. ಜತೆಗೆ ಯಾವಗಲೂ ವಿದ್ಯಾರ್ಥಿ ಸ್ನೇಹಿಯಾಗಿದ್ದ ಅವರು ವಿವಿಯಲ್ಲಿ ವಿದ್ಯಾರ್ಥಿ ಬಳಗವನ್ನೇ ಕಟ್ಟಿದ್ದರು.

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಮಹೇಶ್ ಚಂದ್ರ ಗುರು ಅವರು 2019 ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಗಣನೀಯವಾಗಿ ಗುರುತಿಸಿಕೊಂಡಿದ್ದ ಪ್ರೊ.ಮಹೇಶ್‌ ಚಂದ್ರ ಗುರು ಅವರು ದಸರಾ ವೇಳೆ ಮಹಿಷಾ ದಸರಾ ಆಚರಣೆಗೊಳ್ಳಲು ಪ್ರಮಖ ಪಾತ್ರವಹಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *