ವ್ಹೀಲಿಂಗ್ ಮಾಡುತ್ತಾ ಕಿರಿಕಿರಿ ಮಾಡುತ್ತಿದ್ದ ಪುಂಡರ ಎರಡು ಬೈಕ್ ಗಳನ್ನು ಫ್ಲೈ ಓವರ್ ಮೇಲಿಂದ ಎಸೆದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.
ನೆಲಮಂಗಲದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಬೈಕನ್ನು ಮೇಲ್ಸೆತುವೆ ಮೇಲಿಂದ ಎಸೆಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಬೆಂಗಳೂರಿಂದ ತುಮಕೂರು ಕಡೆಗೆ ಪುಂಡರು ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು. ಅವರನ್ನು ಅಡ್ಡಗಟ್ಟಿ ಕೆಲ ಪ್ರಯಾಣಿಕರು ಪ್ರಶ್ನಿಸಿದ್ದಾರೆ. ನಂತರ ಅವರಿಗೆ ಬುದ್ದಿ ಕಲಿಸಲು ದ್ವಿಚಕ್ರ ವಾಹನವನ್ನು ಹೆದ್ದಾರಿಯ ಮೇಲ್ಸೇತುವೆಯಿಂದ ಕೆಳಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೆಲಮಂಗಲ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಕ್ಗಳನ್ನು ವಶಕ್ಕೆ ಪಡೆದ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.