ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಟ ದರ್ಶನ್ ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ರೌಡಿ ಶೀಟರ್ಗಳ ಜೊತೆ ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
‘ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇನೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್ಫಾರ್ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ’ ಎಂದು ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ. ಶರಣಬಸವ ಅಮೀನ್ಗಢ, ಖಂಡೇವಾಲ್, ಪುಟ್ಟಸ್ವಾಮಿ, ಶ್ರೀಕಾಂತ್ ತಲವಾರ್, ವೆಂಕಪ್ಪ, ಸಂಪತ್, ವಾರ್ಡರ್ ಬಸಪ್ಪ ಅಮಾನತಾದವರು.
ಇದನ್ನೂ ಓದಿ: ಯುಪಿಎಸ್ ನೌಕರರನ್ನು ವಂಚಿಸುವ ಮತ್ತೊಂದು ಹತಾಶ ಪ್ರಯತ್ನ – ಸಿಐಟಿಯು ಖಂಡನೆ
ಮೇಲಧಿಕಾರಿಗಳನ್ನು ಜೈಲಿನಿಂದ ಬೇರೆ ಕಡೆಗೆ ಟ್ರಾನ್ಸ್ಫರ್ ಮಾಡುತ್ತೇವೆ.. ಸಿಸಿಟಿವಿಗಳನ್ನು ಹೆಚ್ಚಿಸಲಾಗುತ್ತಿದ್ದು, ಜಾಮರ್ ಕೂಡಾ ಹಾಕಲಾಗುತ್ತಿದೆ. ಹೀಗಿದ್ದರೂ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಫೋಟೋ ಯಾರು ತೆಗೆದರು? ಯಾರ ಮೊಬೈಲ್ನಲ್ಲಿ ತೆಗದಿದ್ದಾರೆ ಅನ್ನೋದು ಮುಖ್ಯ ಆಗುತ್ತದೆ’ ಎಂದು ಪರಮೇಶ್ವರ್ ಹೇಳಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಕೊಲೆ ಆರೋಪಿ ದರ್ಶನ್ ಕುರ್ಚಿ ಮೇಲೆ ಕುಳಿತು ಸಿಗರೇಟ್ ಸೇದುತ್ತಾ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೊ ಬಹಿರಂಗವಾಗಿದ್ದಾದರೂ ಹೇಗೆ ಎಂಬ ಪ್ರಶ್ನೆ ಜೈಲಿನ ಸಿಬ್ಬಂದಿಯನ್ನು ಕಾಡುತ್ತಿದೆ.
ಇದನ್ನೂ ನೋಡಿ: ನೀಟ್ ಎಡವಟ್ಟು : ಕೆಇಎ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆJanashakthi Media