ಶಾಲೆಯ ಗೋಡೆ ಹಾಗೂ ಮೇಲ್ಛಾವಣಿ ಕುಸಿತ ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಕಡಬ: ಕುಂತೂರು‌ ಸರಕಾರಿ ಶಾಲೆಯ ಕೊಠಡಿಯ  ಗೋಡೆ ಹಾಗೂ ಮೇಲ್ಛಾವಣಿ ಕುಸಿದಿದ್ದು,  ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಆ.27ರ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ. ಮೇಲ್ಛಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ.‌ ನಷ್ಟ ಸಂಭವಿಸಿದೆ.

ಇದನ್ನು ಓದಿ : ಉಡುಪಿ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತ ಅರೆಸ್ಟ್!

ಕಟ್ಟಡದ ಬಳಿ ಜೆಸಿಬಿಯಲ್ಲಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದ್ದು, ಆದ್ದರಿಂದಾಗಿ ಮೊದಲೇ ಶಿಥಿಲಗೊಂಡಿದ್ದ ಕಟ್ಟಡ ಕುಸಿದು ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆ ನಡೆಯುವ ವೇಳೆ ವಿದ್ಯಾರ್ಥಿಗಳು ಆಟದ ಮೈದಾನದಲ್ಲಿ ಇದ್ದುದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ.

ಇದನ್ನು ನೋಡಿ : ಮೋದಿಯಿಂದ ಸಂವಿಧಾನಕ್ಕೆ ಕಂಟಕ ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕಳವಳ ವ್ಯಕ್ತಪಡಿಸಿದ್ದಾರೆ Janashakthi Media

 

Donate Janashakthi Media

Leave a Reply

Your email address will not be published. Required fields are marked *