ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ಲೋಕಾಯುಕ್ತ ತನಿಖೆ ಮುಂದೂವರಿಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ತನಿಖೆ ಮುಂದುವರಿಸಬಹುದು ಎಂದು ಹೈಕೋರ್ಟ್‍ ಆದೇಶ ನೀಡಿದೆ. ಈ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹಿನ್ನಡೆ ಉಂಟಾಗಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಪ್ರಕರಣವನ್ನು ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಸಬಹುದು ಎಂದು ಕೋರ್ಟ್ ಆದೇಶಿಸಿದೆ.

ರಾಜ್ಯ ಸರ್ಕಾರ ಹಾಗೂ ಸಿಬಿಐ ಮಧ್ಯೆಯ ವಿವಾದ ಆಗಿದೆ. ಹೀಗಾಗಿ ಅರ್ಟಿಕಲ್ 131 ಪ್ರಕಾರ ಈ ವಿಚಾರ ಸುಪ್ರೀಂಕೋರ್ಟ್‌ಗೆ ಮಾತ್ರ ತೀರ್ಮಾನ ಮಾಡುವ ಅಧಿಕಾರ ಇದೆ. ಸುಪ್ರೀಂಕೋರ್ಟ್‌ನಲ್ಲಿ ಬಗೆಹರಿಯುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐಗೆ ಅನುಮತಿಸಿದ್ದ ಆದೇಶವನ್ನು ಸರ್ಕಾರವು ಹಿಂಪಡೆದಿರುವುದರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಆ.12 ರಂದು ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಿದ್ದಿದ್ದು ಸರ್ಕಾರದ ನಿರ್ಧಾರದ ವಿರುದ್ಧ ಸಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

.ಕೆ ಶಿವಕುಮಾರ್ ವಿರುದ್ಧ 2020 ರ ಅಕ್ಟೋಬರ್ 3 ರಂದು ಎಫ್‍ಐಆರ್ ದಾಖಲಾಗಿತ್ತು. ಡಿಕೆಶಿ ಆಸ್ತಿ 2013 ರಿಂದ 2018 ರವರೆಗೆ ತೀವ್ರ ಹೆಚ್ಚಾಗಿದೆ ಎಂದು ಸಿಬಿಐ ಆರೋಪಿಸಿದೆ. ಏಪ್ರಿಲ್ 2013 ರಲ್ಲಿ 33.92 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದ್ದ ಡಿ.ಕೆ ಶಿವಕುಮಾರ್ 2018 ರ ವೇಳೆಗೆ 128.6 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದಾರೆ. ಏಪ್ರಿಲ್ 30, 2018ರ ವೇಳೆಗೆ ಅವರ ಒಟ್ಟು ಆಸ್ತಿ ಮೌಲ್ಯ 162.53 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಸಿಬಿಐ ಎಫ್‍ಐಆರ್‌ನಲ್ಲಿ ಉಲ್ಲೇಖಿಸಿದೆ.

2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿ.ಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿ.ಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

Donate Janashakthi Media

Leave a Reply

Your email address will not be published. Required fields are marked *