ತಿಂಗಳಿಗೆ ಕನಿಷ್ಠ ₹31 ಸಾವಿರ ವೇತನ ನಿಗದಿಪಡಿಸಿ; ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ

ಬೆಂಗಳೂರು: ಮಂಗಳವಾರ, 3 ಸೆಪ್ಟೆಂಬರ್‌ ರಂದು ಅರಸು ಭವನದ ಮುಂಭಾಗದಲ್ಲಿ, ತಿಂಗಳಿಗೆ ಕನಿಷ್ಠ ₹31 ಸಾವಿರ ವೇತನ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ವೇತನ

ಪ್ರತಿಭಟನಕಾರರು ‘ಇಲಾಖೆ ಬಾಕಿ ಉಳಿಸಿಕೊಂಡಿರುವ ಸಂಬಳವನ್ನು ಕೂಡಲೇ ಪಾವತಿಸಬೇಕು. ಹಿಂದುಳಿದ ವರ್ಗಗಳ ಇಲಾಖೆಯಲ್ಲಿ (ಬಿಸಿಎಂ) ಕೆಲಸ ಕಳೆದುಕೊಂಡ ಹೊರಗುತ್ತಿಗೆ ಸಿಬ್ಬಂದಿಯನ್ನು ಮರು ನೇಮಿಸಿಕೊಳ್ಳಬೇಕು. ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಇರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸಿಬ್ಬಂದಿ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.

ಇದನ್ನೂ ಓದಿ:  ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ: ಬಸವರಾಜ ಬೊಮ್ಮಾಯಿ

‘ಸೇವಾ ಭದ್ರತೆ ಒದಗಿಸಬೇಕು ಮತ್ತು ಕಾರ್ಮಿಕ ಕಾನೂನು ಪ್ರಕಾರ ಎಲ್ಲರಿಗೂ ವಾರದ ರಜೆ ನೀಡಬೇಕು. ಕೆಲಸದ ಸಮಯ ನಿಗದಿಪಡಿಸಬೇಕು. ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ ನೀಡಬೇಕು. ಅಡುಗೆ ಕೋಣೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಹೊಸದಾಗಿ ಪ್ರಾರಂಭ ಮಾಡುವ ವಸತಿನಿಲಯಗಳ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು.

ವಸಂತನಗರದ ಅರಸುಭವನದ ಮುಂಭಾಗದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು.

ಇದನ್ನೂ ನೋಡಿ: ಕೋವಿಡ್ (Covid) ಸಮಯದಲ್ಲಿ ಬಿಜೆಪಿಯವರು ಮಾನವೀಯತೆಯಿಂದ ಕೆಲಸ ಮಾಡುವ ಬದಲು, ಲೂಟಿ ಮಾಡಿದ್ದಾರೆ

Donate Janashakthi Media

Leave a Reply

Your email address will not be published. Required fields are marked *