ವಿಧಾನಸಭಾ ಚುನಾವಣೆ; ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಭಜರಂಗ್ ಪುನಿಯಾ ಕಾಂಗ್ರೆಸ್‌ಗೆ ಸೇರ್ಪಡೆ

ಹರಿಯಾಣ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಭಜರಂಗ್ ಪುನಿಯಾ ವಿಧಾನಸಭಾ ಚುನಾವಣೆಗೆ ಮುನ್ನ ಶುಕ್ರವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಇಂದು ಮುಂಜಾನೆ, ವಿನೇಶ್ ಮತ್ತು ಬಜರಂಗ್ ಭಾರತೀಯ ರೈಲ್ವೇಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದರು.

ಇದನ್ನು ಓದಿ : ಸುಪ್ರೀಂ ಕೋರ್ಟ್ ನಲ್ಲಿ ಯೋಗಿಯ ಬುಲ್ಡೋಜರ್ ನೀತಿಯ ಎರಡು ಪ್ರಕರಣ ದಾಖಲು

ಇದೀಗ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಈ ಬೆನ್ನಲ್ಲೇ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಭಜರಂಗ್ ಪೂನಿಯಾ ಕಾಂಗ್ರೆಸ್‌ನಿಂದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ಸೆಪ್ಟೆಂಬರ್ 4 ರಂದು ವಿನೇಶ್ ಮತ್ತು ಭಜರಂಗ್ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದರು. ಅದಾದ ಬಳಿಕ ಅವರು ದೆಹಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದರು.

ಇದನ್ನು ನೋಡಿ : ಗೋರಕ್ಷಣೆ ಹೆಸರಲ್ಲಿ ಹತ್ಯೆ – RSS ಬಿತ್ತಿದ ಧ್ವೇಷ ಕಾರಣ – ಶ್ರೀಪಾದ್ ಭಟ್Janashakthi Media

Donate Janashakthi Media

Leave a Reply

Your email address will not be published. Required fields are marked *