ಸಚಿವ ಸಂಪುಟ ಸಭೆ; ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣ ನೀಡುವ ಯೋಜನೆ ಮುಂದುವರೆಸಲು ನಿರ್ಧಾರ

ಬೆಂಗಳೂರು : ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಇಂದು(ಸೆಪ್ಟೆಂಬರ್‌ 6) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ  ಚರ್ಚಿಸಲಾಯಿತು. ಇನ್ನು ಸಭೆಯಲ್ಲಿ ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ಹಿನ್ನಲೆ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ತೀರ್ಮಾನಿಸಲಾಯಿತು.

ಅಷ್ಟೇ ಅಲ್ಲದೇ ಕೆಲವು ಯೋಜನೆಗಳಿಗೆ ಅನುಮೋದನೆ ಸಹ ನೀಡಲಾಯಿತು. ಈ ಕುರಿತು ಸಭೆ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​ಕೆ ಪಾಟೀಲ್ ವಿವರಿಸಿದರು.

ಇದನ್ನು ಓದಿ : ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಮನೆಯಿಂದ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು

  • ರಾಜ್ಯದ ಒಳಾಡಳಿತ ಇಲಾಖೆ 59 ಜನ ಕೈದಿಗಳ ಸನ್ನಡತೆ ಆಧಾರದ ಮೇಲೆ ಅವಧಿ ಮುನ್ನ ಬಿಡುಗಡೆಗೆ ನಿರ್ಧಾರ.
  • ವಸತಿ ಇಲಾಖೆಯಲ್ಲಿ ಬೆಟ್ಟಗೇರಿಯಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ.
  • ಕಾರ್ಮಿಕ ಇಲಾಖೆಯ ಬಳಕೆದಾರರಿಂದ ಸಂಗ್ರಹಿಸುವ, ಕಾನೂನು ಇಲಾಖೆ ಅಡಿ ಬರುವ ಎಂಟು ಕಾಯ್ಡೆ ಅಡಿ, ಬಳಕೆ‌ದಾರರಿಂದ ಸಂಗ್ರಹಿಸುವ ದಂಡವನ್ನ‌ 30% ಹೆಚ್ಚಳಕ್ಕೆ‌ ನಿರ್ಧಾರ.
  • ಕಾನೂನು ಸೇವಾ ತಿದ್ದುಪಡಿ ಕರಡು ನಿಯಮಗಳಿಗೆ 15 ದಿನ ಅವಕಾಶ ನೀಡುವುದು, ಆಕ್ಷೇಪಣೆ ಬಾರದಿದ್ರೆ ಸದರಿ ಕರಡು ನಿಯಮ ಮಂಡಿಸದೆ ನಿರ್ಣಯ ತೆಗೆದುಕೊಳ್ಳಲು ಅನುಮೋದನೆ.
  • ವೈದ್ಯಕೀಯ ಶಿಕ್ಷಣ ಇಲಾಖೆ, ಕಿಮ್ಸ್ ಆಸ್ಪತ್ರೆಗೆ ಸಲಕರಣೆ ಖರೀದಿಗೆ 75 ಕೋಟಿ ಅನುದಾನ ನೀಡಲು ಅನುಮೋದನೆ.
  • ಮೈಸೂರಿನ ನೆಫ್ರೋಲಜಿ ನೂರು ಬೆಡ್ ಸಾಮರ್ಥ್ಯ ಹೆಚ್ಚಳಕ್ಕೆ ಅನುಮೋದನೆ.
  • ಕಲಬುರಗಿಯ ಮಕ್ಕಳ ಆಸ್ಪತ್ರೆಯನ್ನ ಇಂದಿರಾಗಾಂಧಿ ಆಸ್ಪತ್ರೆ ಸಹಯೋಗದಲ್ಲಿ 150 ಹಾಸಿಗೆ ಆಸ್ಪತ್ರೆ ಸ್ಥಾಪನೆಗೆ 221 ಕೋಟಿ ಬಿಡುಗಡೆಗೆ ಅನುಮೋದನೆ.
  • ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣವನ್ನ ನೀಡುವ ಯೋಜನೆ ಮುಂದುವರೆಸಲು ನಿರ್ಧಾರ(ವ್ಯಕ್ತಿಗೆ 170 ರೂ ಹಣವನ್ನ ನೀಡಲಿರೋ ಸರ್ಕಾರ).
  • ಬೆಂಗಳೂರು ನೆಪ್ರೋ- ಯುರಾಲಜಿ ಆಸ್ಪತ್ರೆಯ ಹೊರ ರೋಗಿಗಗಳ ವಿಭಾಗಗಕ್ಕೆ ನೂತನ ಕಟ್ಟಡಕ್ಕೆ 16.15 ಕೋಟಿಗೆ ಅನುಮೋದನೆ.
  • ಕಂದಾಯ ಇಲಾಖೆಯ ಸಹಾಯಕ ಉಪನೋಂದಣ ಅಧಿಕಾರಿ ವರ್ಗಾವಣೆ ಅವಧಿಯನ್ನು 30-09-24ರ ವರೆಗೂ ವಿಸ್ತರಣೆಗೆ ಅನುಮೋದನೆ.
  • ಸ್ವಸಹಾಯ ಗುಂಪಿನ ಮಹಿಳೆಯರಿಗೆ ಹೊಸ ಉದ್ಯೋಗ ಅವಕಾಶ ಒಂದು ಲಕ್ಷ ಮಹಿಳೆಯರಿಗೆ 2500 ಕಾಫಿ ಕಿಯೋಸ್ಕ್‌ಗಳನ್ನ ಒದಗಿಸಲು ಕ್ರಮ 25 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ.
  • ರಾಜ್ಯದ 32 ಸ್ಥಳಗಳಲ್ಲಿ ಸ್ವಯಂ ಚಾಲಿತ ನೂತನ ವಾಹನ ಪಿಟ್ನಸ್ ಕೇಂದ್ರಗಳ ಸ್ಥಾಪನೆಗೆ ಅನುಮೋದನೆ.
  • 341 ಕೋಟಿಯಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದ ಸ್ಥಾಪನೆ.. ಯೋಜನೆಗೆ ಘಟನೋತ್ತರ ಅನುಮೋದನೆ.
  • ಸ್ಕ್ರಾಪಿಂಗ್ ವಾಹನಗಳ ಮೇಲಿನ ದಂಡ ವಿನಾಯತಿ ದಿನಾಂಕ ವಿಸ್ತಾರಣೆ ಅನುಮೋದನೆ – 31-03-26ರ ವರೆಗೆ.
  • ಪಿಪಿಪಿ ಮಾದರಿಯಲ್ಲಿ ಟೆಕ್ಸ್​​ಟೈಲ್ಸ್​ ಪಾರ್ಕ್​ ಮಾಡಲು ಅನುಮೋದನೆ.
  • ಉಡುಪಿಯ ಕಾರ್ಕಳದಲ್ಲಿ ಪಿಪಿಪಿ‌ ಮಾದರಿಯಲ್ಲಿ ಟೆಕ್ಸ್‌ಟೈಲ್ಸ್ ಪಾರ್ಕ್ ಮಾಡಲು ಅನುಮೋದನೆ.
  • ಸ್ಥಳೀಯ ಉದ್ಯೋಗಿಗಳಿಗೆ ಕೌಶಲ್ಯತೆ ನೀಡಲು ನಿಪುಣ ಕರ್ನಾಟಕ ಉಪಕ್ರಮ ಹೆಸರಲ್ಲಿ 100 ಕೋಟಿ ವೆಚ್ಚದಲ್ಲಿ ಟ್ರೈನಿಂಗ್ ನೀಡಲು ಅನುಮೋದನೆ.
  • ಕರ್ನಾಟಕ ಜೈವಿಕ ತಂತ್ರಜ್ಞಾನ ಅಡಿಯಲ್ಲಿ ಐದು ವರ್ಷಗಳ ಕಾಲ ನಾಲ್ಕು ಕೋಟಿ ವೆಚ್ಚದಲ್ಲಿ ಪ್ರೋತ್ಸಾಹ ದನ ನೀಡಲು ಅನುಮೋದನೆ.
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳ ನೀಡಲು ಅನುಮೋದನೆ.
  • ಆಹಾರ ಇಲಾಖೆ ಇಂದ ಪಡಿತರ ಫಲಾನುಭವಿಗಳಿಗೆ ಹಣದ ಬದಲು, ಆಹಾರ ನೀಡುವ ಚಿಂತನೆ ಇತ್ತು.. DBT ಮೂಲಕ ಹಣವನ್ನ ಮುಂದುವರೆಸಲು ನಿರ್ಧಾರ

ಇದನ್ನು ನೋಡಿ : ಎನ್ ಆರ್ ಕಾಲೋನಿ | ಚರಂಡಿ ಕಾಮಗಾರಿ | ಎರಡೂ ಕಡೆ ರಸ್ತೆ ಅಗೆದರೆ ಓಡಾಡೋದು ಹೇಗೆ?- ಜನಾಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *