6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ತ್ರಿಪುರಾದಲ್ಲಿ ಇಬ್ಬರ ಬಂಧನ

ಅಗರ್ತಲಾ: ಉತ್ತರ ತ್ರಿಪುರಾ ಜಿಲ್ಲೆಯಲ್ಲಿ  16 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ಸಂತ್ರಸ್ತ ಬಾಲಕಿ ಧರ್ಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ ಹುಡುಗಿ ಗ್ರಾಮದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಳು. ಆಗ ಬೈಕ್‌ನಲ್ಲಿ ಬಂದ ಇಬ್ಬರು ಆಕೆಯನ್ನು ಅಪಹರಿಸಿ ಸಮೀಪದ ಕಾಡಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಬಾಲಕಿಯನ್ನು ಕಾಡಿನಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಉತ್ತರ ತ್ರಿಪುರಾದ ಪೊಲೀಸ್ ವರಿಷ್ಠಾಧಿಕಾರಿ ಭಾನುಪಾದ ಚಕ್ರವರ್ತಿ ತಿಳಿಸಿದ್ದಾರೆ.

ಇದನ್ನು ಓದಿ  : ಬಿಹಾರ| ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಮರ್ಮಾಂಗವನ್ನು ಬ್ಲೇಡ್‌ನಿಂದ ಕುಯ್ದ ನರ್ಸ್‌

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಹುಡುಗಿಯನ್ನು ನೋಡಿದ ಗ್ರಾಮಸ್ಥರು ಆಕೆಯ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮಸ್ತರು ಮಾಹಿತಿ ನೀಡಿದ ಬಳಿಕ ನಾವು ಘಟನಾ ಸ್ಥಳಕ್ಕೆ ಧಾವಿಸಿ ಆಕೆಯನ್ನು ರಕ್ಷಿಸಿ ಉಪಟಖಾಲಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದೇವೆ. ಬಳಿಕ ಅಲ್ಲಿಂದ ಧರ್ಮ ನಗರ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಸಂತ್ರಸ್ತೆಯ ಸಹೋದರಿ ಮಾಹಿತಿ ನೀಡಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ಸೂಕ್ತ ತನಿಖೆಗಾಗಿ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸ್‌ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇದನ್ನು ನೋಡಿ : ಬೀದರ್: 19 ವರ್ಷದ ಯುವತಿಯ ಮೇಲೆ ಅತ್ಯಾಚಾರ, ಕೊಲೆ

Donate Janashakthi Media

Leave a Reply

Your email address will not be published. Required fields are marked *