ಬೆಂಗಳೂರು: ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ₹30 ಲಕ್ಷಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಅಡಿ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಶಾಸಕ ಮುನಿರತ್ನ, ಸರ್ಕಾರಿ ಅಧಿಕಾರಿ ವಿಜಯ್‌ಕುಮಾರ್, ಕಾರ್ಯದರ್ಶಿ ಅಭಿಷೇಕ್ ಹಾಗೂ ಶಾಸಕರ ಆಪ್ತ ವಸಂತಕುಮಾರ್ ವಿರುದ್ಧ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜ್ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮೋದಿಯವರ 10 ವರ್ಷದ ಅವಧಿಯಲ್ಲಿ ಭಾರತದ ಮೇಲಿನ ಸಾಲ 182 ಲಕ್ಷ ಕೋಟಿ: ಸಿಎಂ ಸಿದ್ದರಾಮಯ್ಯ
ಜಾತಿ ನಿಂದನೆ ಆರೋಪದ ಅಡಿ ಇದೇ ಠಾಣೆಯಲ್ಲಿ ಶಾಸಕರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ವೇಲುನಾಯಕ್ ಎಂಬುವವರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ!
ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಬಳಿಕ ಚಲುವರಾಜು ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಶಾಸಕ ಮುನಿರತ್ನ ನನ್ನನ್ನು ಕರೆದು ಬೆದರಿಕೆ ಹಾಕಿ 20 ಲಕ್ಷ ಹಣ ಕೇಳಿದ್ದರು. ನಾನು ಆತ್ಮಹತ್ಯೆಗೆ ಯತ್ನಿಸಿದ್ದೆ, ಕುಟುಂಬದವರಿಗಾಗಿ ಉಳಿದುಕೊಂಡಿದ್ದೇನೆ. ರೇಣುಕಾಸ್ವಾಮಿಗೆ ಆದ ಗತಿಯೇ ನಿನಗೂ ಆಗುತ್ತೆ ನೋಡು. ರೇಣುಕಾಸ್ವಾಮಿಗೆ ಗತಿ ಕಾಣಿಸಿದ್ದು ನಮ್ಮ ಕಡೆಯವರೇ ಎಂದು ಆವಾಜ್ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಹೆಂಡತಿ-ತಾಯಿ ಬಗ್ಗೆ ಅಶ್ಲೀಲ ಭಾಷೆ ಬಳಕೆ!
ಹಣ ವಸೂಲಿ ಮಾಡಲು ಜಾತಿ ನಿಂದನೆ ಮಾಡಿದ್ದಾರೆ, ಹೆಂಡತಿ ಮತ್ತು ತಾಯಿ ಬಗ್ಗೆ ಅತ್ಯಂತ ಅಶ್ಲೀಲ ಭಾಷೆಯಲ್ಲಿ ನಿಂದಿಸಿ ತಮಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಅರೋಪಿಸಿ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಮುನಿರತ್ನ ಮಾತನಾಡಿದ್ದಾರೆ ಎನ್ನಲಾದ ಆಡಿಯೋವನ್ನು ಬಿಡುಗಡೆ ಮಾಡಿದರು. “ಮುಂದೆ ನಾನು ಜೀವಂತವಾಗಿ ಇರ್ತಿನೋ ಇಲ್ವೋ ಗೊತ್ತಿಲ್ಲ. ನನ್ನ ಜಾತಿ ಬಳಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನನ್ನ ಹೆಂಡತಿ ಫೋಟೋ ತೋರಿಸು ಹೇಗಿದ್ದಾಳೆ ಎನ್ನುತ್ತಾರೆ. ಮನಿರತ್ನ ನನ್ನ ಹೆಂಡತಿಯನ್ನು ಮಂಚಕ್ಕೆ ಕಳುಹಿಸು ಎಂದಿದ್ದಾರೆ. ನನ್ನ ತಾಯಿಯ ಬಗ್ಗೆ ಅಸಹ್ಯವಾಗಿ ಮಾತಾಡಿದ್ದಾರೆ” ಎಂದು ಆರೋಪಿಸಿದರು.
ದಲಿತರ ಬಗ್ಗೆ, ಮಹಿಳೆಯರ ಬಗ್ಗೆ, ಒಕ್ಕಲಿಗ ಸಮುದಾಯದ ಬಗ್ಗೆ ಬಿಜೆಪಿಗಿರುವ ಅಸಹನೆ ದ್ವೇಷ ಮುನಿರತ್ನರ ಬಾಯಲ್ಲಿ ಬಯಲಾಗಿದೆ. ಬಿಜೆಪಿ ಆಡಳಿತದಲ್ಲಿ ಗುತ್ತಿಗೆದಾರರನ್ನು ಪೀಡಿಸುವ ಭೀಕರತೆಯ ಅನಾವರಣವಾಗಿದೆ. ಈ ಕಾರಣಕ್ಕಾಗಿಯೇ ಬಿಜೆಪಿ ಅವಧಿಯಲ್ಲಿ ಹಲವು ಗುತ್ತಿಗೆದಾರರು ಆತ್ಮಹತ್ಯೆಯ ದಾರಿ ಹಿಡಿದಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ. ಕೂಡಲೇ ರಾಜ್ಯ ಬಿಜೆಪಿ ದಲಿತ ಸಮುದಾಯದ ಕಾಲು ಹಿಡಿದು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.
ಇದನ್ನೂ ನೋಡಿ: ರಾಜ್ಯಲ್ಲಿರುವುದು 60% ಸರ್ಕಾರವೇ? – ಜಸ್ಟೀಸ್ ಸಂತೋಷ ಹೆಗಡೆJanashakthi Media