ಮುಸ್ಲಿಮರು ಹೆಚ್ಚಾಗಿರುವ ಪ್ರದೇಶವನ್ನು ಪಾಕಿಸ್ತಾನ ಎಂದು ಕರೆದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ

ಬೆಂಗಳೂರು: ಬೆಂಗಳೂರಿನ ಗೋರಿಪಾಳ್ಯದ ಕುರಿತು ಉಲ್ಲೇಖಿಸುವಾಗ, ಮುಸ್ಲಿಂ ಬಾಹುಳ್ಯದ ಪ್ರದೇಶವನ್ನು ಪಾಕಿಸ್ತಾನ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಕರೆದಿರುವ ಘಟನೆ ನಡೆದಿದೆ.

Waseem ವಸೀಮ್ وسیم ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು,  ನ್ಯಾಯಾಧೀಶರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವವರೊಬ್ಬರು ಇಂತಹ ಹೇಳಿಕೆಯನ್ನು ನೀಡಲು ಹೇಗೆ ಸಾಧ್ಯ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮೈಸೂರು ರಸ್ತೆ ಮೇಲುಸೇತುವೆಗೆ ಹೋಗಿ ನೋಡಿ, ಪ್ರತಿ ಆಟೋರಿಕ್ಷಾದಲ್ಲೂ 10 ಮಂದಿಯಿರುತ್ತಾರೆ. ಇಲ್ಲಿ ಕಾನೂನು ಅನ್ವಯಿಸುವುದಿಲ್ಲ. ಯಾಕೆಂದರೆ, ಮೈಸೂರು ಮೇಲ್ಸೇತುವೆಯು ಗೋರಿಪಾಳ್ಯದಿಂದ ಎಡಕ್ಕೆ ಮಾರುಕಟ್ಟೆಗೆ ತೆರಳುತ್ತದೆ. ಇದು ಪಾಕಿಸ್ತಾನದಲ್ಲಿದೆ, ಭಾರತದಲ್ಲಲ್ಲ. ಇದು ವಾಸ್ತವ. ಅಲ್ಲಿಗೆ ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ನೇಮಕ ಮಾಡಿದರೂ, ಅವರನ್ನು ಥಳಿಸಲಾಗುತ್ತೆ” ಎಂದು ಇತ್ತೀಚೆಗೆ ನಡೆದ ವಿಚಾರಣೆಯೊಂದರ ಸಂದರ್ಭದಲ್ಲಿ, ವೇದವ್ಯಾಸಾಚಾರ್ ಶ್ರೀಷಾನಂದ ಸಾಯಿ ಹೇಳಿದ್ದಾರೆ.

 

ಇದನ್ನೂ ಓದಿ: ರಾಮನಾಥ್ ಕೋವಿಂದ್ ವರದಿ | ಒಂದು ರಾಷ್ಟ್ರ, ಒಂದು ಚುನಾವಣೆಗೆ 3 ಮಾಜಿ ಮುಖ್ಯ ನ್ಯಾಯಾಧೀಶರ ವಿರೋಧವಿತ್ತು

ಬೆಂಗಳೂರು ಮೂಲದ ಹೋರಾಟಗಾರ್ತಿ ಬೃಂದಾ ಅಡಿಗೆ ಅವರು ನ್ಯಾಯಾಧೀಶರ ಹೇಳಿಕೆಯನ್ನು ಟೀಕಿಸಿದ್ದಾರೆ. “ಭಾರತೀಯ ಮುಸ್ಲಿಮರನ್ನು ವ್ಯವಸ್ಥಿತವಾಗಿ ಅಮಾನವೀಯಯಾಗಿ ನಡೆಸಿಕೊಳ್ಳುವ ಪ್ರಯತ್ನ ಇದಾಗಿದೆ. ಕಾನೂನು ಎತ್ತಿ ಹಿಡಿಯಬೇಕಾದವರೆ ಹೀಗೆ ಮುಸ್ಲಿಂರ ವಿರುದ್ಧ ದ್ವೇಷಕಾರಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

“ಬೇರೆ ಧರ್ಮದ ವ್ಯಕ್ತಿಯನ್ನು ಭಾರತೀಯ ಸಾಂವಿಧಾನಿಕ ನ್ಯಾಯಾಲಯದ ನ್ಯಾಯಾಧೀಶರೊಬ್ಬರು ಪಾಕಿಸ್ತಾನಿ ಎಂದು ಸಂಬೋಧಿಸಿದ್ದಾರೆ. ಇದು ನಾಚಿಕೆಗೇಡು” ಎಂದು ವಕೀಲ ಸಂಜಯ್ ಘೋಷ್ ತೀವ್ರವಾಗಿ ಖಂಡಿಸಿದ್ದಾರೆ. “ಒಂದು ವೇಳೆ ನ್ಯಾಯಾಂಗದಲ್ಲಿನ ವ್ಯಕ್ತಿಯೊಬ್ಬರು ಈ ರೀತಿ ಮಾಡಿದರೆ, ಭಾರತೀಯ ಮುಸ್ಲಿಮರೊಂದಿಗೆ ಸಾಮಾನ್ಯ ಜನರು ಮತ್ತಷ್ಟು ಅಮಾನುಷವಾಗಿ ನಡೆದುಕೊಳ್ಳುವಂತಾಗುತ್ತದೆ. ನ್ಯಾಯಾಂಗ, ಪೊಲೀಸ್, ಶೈಕ್ಷಣಿಕ ಸಂಸ್ಥೆಗಳು, ಮಾಧ್ಯಮಗಳು, ಸರಕಾರ ಹಾಗೂ ಸಮಾಜದ ದೊಡ್ಡ ಸಂಖ್ಯೆಯು ಭಾರತೀಯ ಮುಸ್ಲಿಮರನ್ನು ಅವರು ಮುಸ್ಲಿಮರು ಎಂಬ ಕಾರಣಕ್ಕೇ ಹೀಗೆ ನಡೆಸಿಕೊಳ್ಳುತ್ತಿದೆ” ಎಂದು ವಸೀಂ ಎಂಬವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ನೋಡಿ: ನಾಗಮಂಗಲ | ಜೆಡಿಎಸ್‌ ಹೆಗಲ ಮೇಲೆ ಸಂಘಪರಿವಾರದ ಕೋಮುಗಲಭೆಯ ಬಂದೂಕು – ಎಸ್‌.ವೈ ಗುರುಶಾಂತ Janashakthi Media

Donate Janashakthi Media

Leave a Reply

Your email address will not be published. Required fields are marked *