‘ಮಿನಿ ಪಾಕಿಸ್ತಾನ’ ಎಂದು ಕರೆದಿದ್ದ ಪ್ರಕರಣ: ವಿವರಣೆ ಕೇಳಿದ ಸುಪ್ರೀಂ ಕೋರ್ಟ್

Please follow and like us:
ನವದೆಹಲಿ: ಶುಕ್ರವಾರ, 20 ಸೆಪ್ಟೆಂಬರ್‌ ರಂದು, ಸುಪ್ರೀಂ ಕೋರ್ಟ್‌ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಿ. ಶ್ರೀಶಾನಂದ ಮುಸ್ಲಿಂ ಬಾಹುಳ್ಯದ ಪ್ರದೇಶವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿದ್ದ ಪ್ರಕರಣ, ಸಂಬಂಧ ಸ್ವಯಂ ಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡಿದ್ದು ಘಟನೆ ಕುರಿತಂತೆ ವಿವರಣೆ ಕೇಳಿದೆ.

ಕಳೆದ ಆಗಸ್ಟ್‌ 28ರಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಿ ಶ್ರೀಶಾನಂದ ಬಾಡಿಗೆ ನಿಯಂತ್ರಣ ಕಾಯಿದೆಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆ  ಈ ಹೇಳಿಕೆ ನೀಡಿದ್ದರು.

ಮುಸ್ಲಿಂ ಬಾಹುಳ್ಯದ ಗೋರಿ ಪಾಳ್ಯ ಪ್ರದೇಶದಲ್ಲಿ ಆಟೋವೊಂದರಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಕುಳಿತಿದ್ದಾಗ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಅವರು ಪ್ರತಿಕ್ರಿಯಿಸಿದ್ದರು. ‘ಮೈಸೂರು ರಸ್ತೆಯ ಫ್ಲೈಓವರ್ ಕಡೆಗೆ ಹೋಗಿ, ಪ್ರತಿ ಆಟೋರಿಕ್ಷಾದಲ್ಲಿ 10 ಜನರಿರುತ್ತಾರೆ.

ಇದನ್ನೂ ಓದಿ: ಬಿಜೆಪಿ ಕುಮ್ಮಕ್ಕಿನಿಂದಲೇ ಗಣೇಶ ವಿಸರ್ಜನೆಯ ವೇಳೆ ಗಲಾಟೆ ನಡೆದಿದೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ರಸ್ತೆಯ ಫ್ಲೈಓವರ್ ಮಾರುಕಟ್ಟೆಯಿಂದ ಗೋರಿಪಾಳ್ಯ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ… ನೀವು ಎಷ್ಟೇ ಕಟ್ಟುನಿಟ್ಟಿನ ಅಧಿಕಾರಿಯನ್ನು ಕಳುಹಿಸಿದರೂ ಅವರನ್ನು ಹೊಡೆಯಲಾಗುತ್ತದೆ’ ಎಂಬ ಹೇಳಿಕೆ ನೀಡಿದ್ದರು.

ಘಟನೆ ವಿಡಿಯೋ ಕ್ಲಿಪ್ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆ ಪ್ರಕರಣ ಸಂಬಂಧ ಉತ್ತರಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್‌ಗೆ ವರದಿ ಕೇಳಿರುವ ಸುಪ್ರೀಂ ಕೋರ್ಟ್, ಈ ಪ್ರಕರಣದ ವಿಚಾರಣೆ ಸೋಮವಾರ ನಡೆಯಲಿದೆ ಎನ್ನಲಾಗಿದೆ.

ಇದನ್ನೂ ನೋಡಿ: ವಿಚ್ಛಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಬೇಕು – ಸಿದ್ದರಾಮಯ್ಯ

Please follow and like us:
Donate Janashakthi Media

Leave a Reply

Your email address will not be published. Required fields are marked *