ರಾಜ್ಯದಲ್ಲಿ ಹೆಚ್ಚುತ್ತಿವೆ ಬಾಲಕರ ಹೃದಯಾಘಾತ – ಒಂದು ವಾರದಲ್ಲಿ ನಾಲ್ವರು ವಿದ್ಯಾರ್ಥಿಗಳ ಸಾವು

ಹಾಸನ : 11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ , ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಚನ್ನಾಪುರ ಗ್ರಾಮದ ಕಾವ್ಯಶ್ರೀ ಎಂಬುವವರ ಮಗ ಸಚಿನ್ ಎಂದು ತಿಳಿದು ಬಂದಿದೆ.  ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಇದ್ದಲ್ಲಿಯೇ ಸಚಿನ್ ಕೊನೆಯುಸಿರೆಳೆದಿದ್ದಾರೆ. ನಿನ್ನೆ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾವನ್ನಪ್ಪಿದ್ದ ಎಂದು ವೈದ್ಯರು ಪೋಷಕರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ

ವಾರದಲ್ಲಿ ನಾಲ್ಕನೇ  ಪ್ರಕರಣ : ರಾಜ್ಯದಲ್ಲಿ ಬಾಲಕರ ಹೃದಯಾಘಾತ  ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ನಾಲ್ಕು ಸಾವಿನ ಪ್ರಕರಣಗಳು ವರದಿಯಾಗಿದೆ.

ಕಳೆದ ಎರಡು ದಿನಗಳ ಹಿಂದಷ್ಟೇ ಯಾದಗಿರಿ ಜಿಲ್ಲೆಯ ಶಹಾಪೂರ ನಗರದಲ್ಲಿರುವ ಖಾಸಗಿ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿರುವಾಗಲೇ ವಿದ್ಯಾರ್ಥಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದ. 16 ವರ್ಷದ ಚೇತನಕುಮಾರ್ ರಾಠೋಡ್ ಮೃತ ಬಾಲಕನಾಗಿದ್ದು, ಶಹಾಪೂರ ತಾಲೂಕಿನ ಕರ್ಕಳ್ಳಿ ತಾಂಡಾದ ನಿವಾಸಿಯಾಗಿದ್ದ.

ಮೃತ ಬಾಲಕ ಸಾವಿಗೂ ಮುನ್ನ ವಾಂತಿ ಹಾಗೂ ಎದೆನೋವು ಎಂದಿದ್ದನಂತೆ, ಆದರೆ ಪರೀಕ್ಷೆ ಇದೆ ಸುಮ್ಮನೆ ಪರೀಕ್ಷೆ ಬರೆ ಎಂದು ಶಾಲಾ ಆಡಳಿತ ಮಂಡಳಿ ಗದರಿದ್ದರಂತೆ. ಇದಾದ 2 ಗಂಟೆಗಳ ಬಳಿಕ ಮೂರ್ಛೆ ತಪ್ಪಿ ಬಿದ್ದಿದ ಬಾಲಕನನ್ನು ಶಹಾಪೂರ ಸರ್ಕಾರಿ ಆಸ್ಪತ್ರೆಗೆ ಶಾಲಾ ಆಡಳಿತ ಮಂಡಳಿ ದಾಖಲಿಸಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಚೇತನಕುಮಾರ್ ಅಸುನಿಗಿದ್ದ.

ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಯಾಗಿರುವ ಪೃಥ್ವಿರಾಜ್ ವಾಕಿಂಗ್ ಮಾಡ್ತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಪ್ರವಾಸಿ ಮಂದಿರದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು 20 ವರ್ಷದ ಪೃಥ್ವಿರಾಜ್ ಎಂದು ಗುರುತಿಸಲಾಗಿದೆ. ವಾಕ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದ ಪೃಥ್ವಿರಾಜ್ ನನ್ನು ತಕ್ಷಣ ಸಮೀಪದ ಮೆಗ್ಗಾನ್ ಆಸ್ಪತ್ರೆಗೆ ವಾಯುವಿಹಾರಿಗಳು ದಾಖಲು ಮಾಡಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ.

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಖಾಸಗಿ ಶಾಲೆಯೊಂದರಲ್ಲಿ ತರಗತಿಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ತರುಣ್ ಅತ್ತನೂರು (14) ಎಂಬ ವಿದ್ಯಾರ್ಥಿ  ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದ. ಎಂಟನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ತರುಣ್ ಎಂದಿನಂತೆ ಶಾಲೆಗೆ ಆಗಮಿಸಿದ್ದ. ಆದರೆ ಶಾಲೆಯಲ್ಲಿ ಲೋ ಬಿಪಿಯಿಂದ ಏಕಾಏಕಿ ಕುಸಿದು ಬಿದ್ದಿದ್ದ. ಈತನನ್ನು ಶಿಕ್ಷಕರು, ಸಿಬ್ಬಂದಿಗಳು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಅಷ್ಟೊತ್ತಿಗೆ ವಿದ್ಯಾರ್ಥಿ ಮೃತಪಟ್ಟಿದ್ದ.

“ಶಾಲೆಗೆ ಹೋಗುವ ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳ ಹೆಚ್ಚಳವು ಕಳವಳಕಾರಿ ಪ್ರವೃತ್ತಿಯಾಗಿದೆ” ಎಂದು ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಅಶ್ವನಿ ಮೆಹ್ತಾ ಹೇಳುತ್ತಾರೆ. ಶಾಲೆಗಳಲ್ಲಿ ಹೋಮ್‌ ವರ್ಕ್‌ ನೆಪದಲ್ಲಿ ವಿಪರೀತ ಕೆಲಸಗಳನ್ನು ಕೊಡಲಾಗುತ್ತಿದೆ, ಮಕ್ಕಳನ್ನು ದೈಹಿಕ ಚಟುವಟಿಕೆಯಲ್ಲಿ ತೊಡಗಿಸಲು ಪ್ರಯತ್ನಿಸುತ್ತಿಲ್ಲ. ಆಹಾರ ಕ್ರಮದಲ್ಲಿ ಬದಲಾವಣೆಗಳು ಆಗುತ್ತಿವೆ. ಮೊಬೈಲ್‌ಗೆ ಅಡಿಟ್‌ ಆಗುತ್ತಿದ್ದಾರೆ, ಈ ಎಲ್ಲಾದರ ಪರೀಣಾಮ ಮಕ್ಕಳ ದೈಹಿಕ ಬೆಳವಣಿಗೆ ಏರುಪೇರಾಗುವ ಸಾಧ್ಯತೆ ಇದೆ. ಹಾಗಾಗಿ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ನೋಡಿ: ನಾಗಮಂಗಲ ಮತೀಯ ಗಲಭೆ- ಮುಂದುವರಿದ ನೂರು ವರ್ಷಗಳ ರಕ್ತಚರಿತ್ರೆ. Janashakthi Media

Donate Janashakthi Media

Leave a Reply

Your email address will not be published. Required fields are marked *