ಠಾಣೆ: ಬೀದಿನಾಯಿಯನ್ನು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಸಾಯಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ಘೋಡ್‌ಬಂದರ್‌ನ ಮೊಗರ್ಪಾಡಾ ದಲ್ಲಿ ಆರೋಪಿಯನ್ನು ಗೋಕುಲ್ ಥೋರ್ ಎನ್ನುವಾತ ಬೀದಿನಾಯಿಯನ್ನು ಹೊಡೆದು ಸಾಯಿಸಿದ್ದು, ಆತನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಇದನ್ನು ಓದಿ : ಅದೃಷ್ಠವಶಾತ್ ಘಟನೆ: ಒಂದೇ ಸೆಕೆಂಡಿನಲ್ಲಿ ಮಾಯವಾದ ಪುಣೆ ಕಾರ್ಪೋರೇಶನ್ ನೀರಿನ ಟ್ರಕ್!
ಆರೋಪಿಯು ಬೀದಿ ನಾಯಿಯನ್ನು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು, ತೀವ್ರವಾಗಿ ಗಾಯಗೊಳಿಸಿದ್ದಾನೆ. ಚಿಕಿತ್ಸೆ ಕೊಡಿಸಿದಾದರೂ ನಾಯಿಬದುಕುಳಿಯಲಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 325 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನು ನೋಡಿ : ಸತ್ತವರ ಹೆಸರಲ್ಲಿ ಭೂಮಿ ಕಬಳಿಸಿದ ಕುಮಾರಸ್ವಾಮಿ, ಯಡಿಯೂರಪ್ಪ – ಕೃಷ್ಣ ಬೈರೇಗೌಡ ಆರೋಪ