ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ತೀವ್ರವಾಗಿ ಗುರಿಯಾಗಿಸಿ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾವು ರಂಗೇರುತ್ತಿದ್ದೂ, ಎಲ್ಲಾ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು ಬಿರುಸಿನಿಂದ ನಡೆಸುತ್ತಿದ್ದಾರೆ.ಈಮಧ್ಯೆ ಶನಿವಾರದಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ಚುನಾವಣೆಗೂ ಮುನ್ನ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರ್ಜರಿಯ ಪ್ರಚಾರ ಮಾಡಿದ್ದಾರೆ. ಕಣಿವೆ ರಾಜ್ಯದಲ್ಲಿ ನಡೆದ ಸಮಾವೇಶದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಆರೆಸ್ಸೆಸ್ ಮತ್ತು ಬಿಜೆಪಿಯನ್ನು ತೀವ್ರವಾಗಿ ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಭಾಷಣದಲ್ಲಿ, ‘ಆರೆಸ್ಸೆಸ್-ಬಿಜೆಪಿಯ ವಿಷಕಾರಿ ಮನಸ್ಥಿತಿಗೆ ಕಾಂಗ್ರೆಸ್ ಹೆದರುವುದಿಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್ ಗಾಂಧಿಗೆ ಬೆದರಿಕೆ ಹಾಕಿರುವ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸಲಿದೆ ಎಂದು ಹೇಳಿದರು. ಅಲ್ಲದೇ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿ ನಾಯಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದು ಖರ್ಗೆ ಆರೋಪಿಸಿದರು.

ನಾವು ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿಲ್ಲ – ಖರ್ಗೆ

ನಂತರ ಭಾರತ-ಪಾಕ್ ಸಂಬಂಧದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ಮೋದಿ ಸರ್ಕಾರವನ್ನು ಗುರಿಯಾಗಿಸಿದರು. ಕಾಂಗ್ರೆಸ್ ಪಾಕಿಸ್ತಾನದೊಂದಿಗೆ ಮಾತುಕತೆಯನ್ನು ಪುನರಾರಂಭಿಸಲು ಬಯಸುತ್ತದೆ ಎಂದು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವೂ ಸುಳ್ಳು, ಅವರು ಸಮಸ್ಯೆಯನ್ನು ಬೇರೆಡೆಗೆ ತಿರುಗಿಸಲು ಬಯಸುತ್ತಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ನಾಗಮಂಗಲ ಕೋಮುಗಲಭೆ ಪ್ರಕರಣದಲ್ಲಿ ಬಂಧನ ಭೀತಿ: ಗ್ರಾಮ ತೊರೆದು ಹೋಗುತ್ತಿದ್ದ ಯುವಕ ಬ್ರೈನ್ ಸ್ಟ್ರೋಕ್‌ನಿಂದ ಮೃತ

ಅಲ್ಲದೇ, ನಾವು ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿಲ್ಲ, ಪಾಕಿಸ್ತಾನವನ್ನು ತಬ್ಬಿಕೊಳ್ಳಲೂ ಹೋಗಿಲ್ಲ, ತಬ್ಬಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದೀರಿ, ಪ್ರೀತಿ ನಮ್ಮೊಂದಿಗೆ, ಅವರ ಮದುವೆಯೂ ಪಾಕಿಸ್ತಾನದೊಂದಿಗೆ ಎಂದು ನರೇಂದ್ರ ಮೋದಿ ವಿರುದ್ಧ ವ್ಯಂಗ್ಯವಾಗಿ ವಾಗ್ದಾಳಿ ನಡೆಸಿದರು.

ಇದೇ ವೇಳೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದ್ವೇಷದ ವಾತಾವರಣ ಸೃಷ್ಟಿಸುತ್ತಿದೆ ಎಂದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಶಾಸಕರು, ಸಂಸದರು ಸೇರಿದಂತೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರು ಸತ್ಯ ಮಾತನಾಡಿದ್ದಕ್ಕಾಗಿ ನಮ್ಮ ನಾಯಕರ ನಾಲಿಗೆಯನ್ನು ಕತ್ತರಿಸುವ ಕುರಿತು ಮಾತನಾಡುತ್ತಾರೆ ಮತ್ತು ಅವರ ವಿರುದ್ಧ ಅವರ ಅಜ್ಜಿ ಇಂದಿರಾ ಗಾಂಧಿಯವರ ವಿರುದ್ಧ ದ್ವೇಷದ ವಾತಾವರಣ ನಿರ್ಮಿಸಲಾಗಿದೆ ಎಂದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಇಂತಹ ಪ್ರಚೋದಕ ಭಾಷಣಗಳನ್ನು ಪ್ರಧಾನಿ ನರೇಂದ್ರ ಮೋದಿ ನಿರ್ಲಕ್ಷಿಸುತ್ತಾರೆ ಎಂದು ಹೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರು, ಅವರು ಈ ನಾಯಕರಿಗೆ ಲಗಾಮು ಹಾಕಲು ಮತ್ತು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲರಾಗಿದ್ದಾರೆ, ಏಕೆಂದರೆ ಅವರು ಅವರಿಗೆ ಹೆದರುತ್ತಾರೆ ಎಂದರು.

ಇದನ್ನೂ ನೋಡಿ: ವಚನಾನುಭವ -13| ಮನದೊಳಗಿನ ಕೊಳೆಯನ್ನು ತೊಳೆಯದೆ , ಮೈ ಮೇಲಿನ ಕೊಳೆಯನ್ನು ತೊಳೆದು, ಮಡಿಯುಟ್ಟುರೆ ಸಾಕೆ? | ಅಲ್ಲಮನ ವಚನ

Donate Janashakthi Media

Leave a Reply

Your email address will not be published. Required fields are marked *