ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ರೂಪಿಸಿದ ಕೇಂದ್ರ ಸರಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ

ಮಂಗಳೂರು : ಬಿಜೆಪಿ ನೇತ್ರತ್ವದ NDA ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಕೂಡಲೇ ಹಿಂಪಡೆಯುವಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು( 23-09-2024) ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ JCTU ನೇತ್ರತ್ವದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ಕಾನೂನು

ಕಾರ್ಪೊರೇಟ್ ಕಂಪೆನಿಗಳ ಹಿತ ಕಾಯುವ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶಭರಿತವಾಗಿ ಘೋಷಣೆಗಳನ್ನು ಕೂಗಿದರು.

ಪುತ್ತೂರು: ಪುತ್ತೂರನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯಾಚರಿಸುತ್ತಿರುವ ಟೌನ್ ಕೋ-ಅಪರೇಟೀವ್ ಬ್ಯಾಂಕ್‍ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ ನಡೆದಿದೆ. ಈ ಬಗ್ಗೆ ಬ್ಯಾಂಕ್‍ನ ಮಹಾಸಭೆಯಲ್ಲಿ ಪ್ರಶ್ನಿಸಿದ ತನ್ನ ಮೇಲೆ ಹಲ್ಲೆ ನಡೆ ಸುವ ಮೂಲಕ ಗೂಂಡಾಗಿರಿ ನಡೆಸಿ ನಮ್ಮ ಧ್ವನಿಯನ್ನು ಅಡಗಿಸುವ ಪ್ರಯತ್ನ ನಡೆಸಲಾಗಿದೆ ಎಂದು ಬ್ಯಾಂಕ್‍ನ ಸದಸ್ಯ, ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪಿಸಿದ್ದಾರೆ.

ಅವರು ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ 100 ವರ್ಷಕ್ಕೂ ಹಳೆಯದಾದ ಈ ಟೌನ್‍ ಬ್ಯಾಂಕ್ ಸಭಾಂಗಣ ವನ್ನು ಕಾರ್ಯಕ್ರಮಗಳಿಗೆ ಬಾಡಿಗೆ ನೀಡಲಾಗುತ್ತಿದೆ. ಆದರೆ ಇದರಿಂದ ಬರುವ ಹಣವನ್ನು ಬ್ಯಾಂಕಿನ ಆದಾಯದಲ್ಲಿ ತೋರಿಸುತ್ತಿಲ್ಲ. ಬೈಲಾ ತಿದ್ದುಪಡಿ ಮಾಡದೆ ಬ್ಯಾಂಕಿಗೆ ಸಿಇಒ ನೇಮಕ ಮಾಡಲಾಗುತ್ತಿದೆ. ಆಡಳಿತ ಮಂಡಳಿ ತಮಗೆ ಬೇಕಾದವರನ್ನು ಆಯ್ಕೆ ಮಾಡುವ ಮೂಲಕ ಸಹಕಾರ ನಿಯಮವನ್ನು ಗಾಳಿಗೆ ತೂರಿ ಲಕ್ಷಾಂತರ ರೂ ಸಂಬಳ ನೀಡಿ ನಿಯೋಜನೆ ಮಾಡಲಾಗುತ್ತದೆ. ಬ್ಯಾಂಕಿನ ಚುನಾವಣೆಯಲ್ಲಿ ಸಂಘ ಪರಿವಾರದವರು ಮಾತ್ರ ಸ್ಪರ್ಧಿಸುವಂತೆ ಹುನ್ನಾರ ನಡೆಸುತ್ತಿದ್ದಾರೆ. ಬ್ಯಾಂಕಿನ ಸಿಬ್ಬಂದಿ ಆಯ್ಕೆಯಲ್ಲೂ ಕಾನೂನು ಮೀರಿ ಸಂಘಪರಿವಾರದವರನ್ನು ಮಾತ್ರ ನಿಯೋಜಿಸಿ ದ್ದಾರೆ. ಕೋಟ್ಯಾಂತರ ರೂ. ವ್ಯವಹಾರ ನಡೆಸುವ ಸಂಸ್ಥೆ ಈತನಕ ಒಂದೇ ಒಂದು ಶಾಖೆ ತೆರೆಯುವ ಕೆಲಸ ಮಾಡಿಲ್ಲ. ಸದಸ್ಯರಿಗೆ ಡಿವಿಡೆಂಟ್ ಏರಿಕೆ ಮಾಡುವುದಿಲ್ಲ. ಎಲ್ಲವನ್ನೂ ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳುವ ಕೆಲಸ ಆಡಳಿತ ಮಂಡಳಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಮಹಾಸಭೆಯಲ್ಲಿ ಈ ಅವ್ಯವಹಾರದ ಬಗ್ಗೆ ಪ್ರಶ್ನಿಸಿದಾಗ ನನ್ನ ಮೇಲೆ ಹಲ್ಲೆ ನಡೆಸಲು ಕೆಲವರು ಮುಂದಾಗಿದ್ದಾರೆ. ಈ ಸಂದರ್ಭ ವೇದಿಕೆಯಲ್ಲಿ ಕುಳಿತ ಆಡಳಿತ ಮಂಡಳಿಯವರು ಹೆಬ್ಬೆಟ್ಟು ತೋರಿಸಿ ಹಲ್ಲೆಗೆ ಕುಮ್ಮಕ್ಕು ಕೊಡುವ ಕೆಲಸ ಮಾಡಿ ದ್ದರು. ಈ ಬಗ್ಗೆ ನಗರ ಠಾಣೆಯಲ್ಲಿ ದೂರು ಕೊಟ್ಟ ಬಳಿಕ ಮುಚ್ಚಳಿಕೆ ಬರೆದುಕೊಡುವ ಕೆಲಸ ಆಗಿದೆ. ಬ್ಯಾಂಕಿನ ಅವ್ಯವ ಹಾರದ ವಿರುದ್ಧ ಈತನಕ 8 ದೂರುಗಳನ್ನು ನೀಡಿದ್ದೇನೆ. ಈ ದೂರುಗಳ ವಿಚಾರಣೆ ಸೆ.29ರಂದು ಜಿಲ್ಲಾ ಸಹಕಾರಿ ನಿಬಂಧಕರ ಮೂಲಕ ನಡೆಯಲಿದೆ. ಈ ಬ್ಯಾಂಕ್ ನಲ್ಲಿ ನಡೆಯುತ್ತಿರುವ ನಿಯಮ ಉಲ್ಲಂಘನೆ ಬಗ್ಗೆ ರಿಸರ್ವ್ ಬ್ಯಾಂಕಿಗೂ ದೂರು ಸಲ್ಲಿಸಿದ್ದೇನೆ ಎಂದು ಅವರು ತಿಳಿಸಿದರು.,

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ AITUC ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೇರಿಂಜರವರು ಮಾತನಾಡಿ, ಕೈಗಾರಿಕಾ ಸಂಬಂಧ ಕಾಯ್ದೆಯು ಕಾರ್ಮಿಕ ಸಂಘಗಳ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳುತ್ತಿದೆ.ವಾರ್ಷಿಕ ರಿಟರ್ನ್ಸ್ ಸಲ್ಲಿಸುವಲ್ಲಿ ಕಾರ್ಮಿಕ ಸಂಘಗಳು ವಿಳಂಬ ಮಾಡಿದರೆ ಸಂಘದ ನೋಂದಣಿಯನ್ನು ರದ್ದು ಅಥವಾ ಭಾರೀ ದಂಡ ವಿಧಿಸುವ ಮೂಲಕ ಸಂಘಗಳ ಅಸ್ತಿತ್ವಕ್ಕೆ ದಕ್ಕೆ ತರುವ ಕೆಲಸ ಮಾಡುತ್ತಿದೆ. ಕಾರ್ಮಿಕರ ಮುಷ್ಕರದ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಇದನ್ನು ಓದಿ : 1 ವರ್ಷದಿಂದ ಕುಡಿಯಲು ನೀರು ಬರ್ತಿಲ್ಲ: ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯ ನಿವಾಸಿಗಳು

ಪ್ರಾಸ್ತಾವಿಕವಾಗಿ ಮಾತನಾಡಿದ CITU ಜಿಲ್ಲಾ ಪ್ರದಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಕಾರ್ಮಿಕ ವಿರೋಧಿಯಾದ 4 ಸಂಹಿತೆಗಳ ವಿಚಾರಗಳನ್ನು ಎಳೆಎಳೆಯಾಗಿ ಬಿಡಿಸಿ ಹೇಳುತ್ತಾ, ಈ ಸಂಹಿತೆಯು ಅಂತರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸಿ ದುಡಿಮೆಯ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಲು ಅನುಮತಿ ನೀಡಿದೆ.ವೇತನ ಕಾಯಿದೆಯು ಕನಿಷ್ಠ ಚೇತನ ಪರಿಕಲ್ಪನೆಯನ್ನೇ ದುರ್ಬಲಗೊಳಿಸುತ್ತಿದೆ ಎಂದು ಹೇಳಿದರು. ಕಾನೂನು

ಪ್ರತಿಭಟನೆಯನ್ನುದ್ದೇಶಿಸಿ CITU ಜಿಲ್ಲಾ ನಾಯಕರಾದ ವಸಂತ ಆಚಾರಿ,ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ರಾಜ್ಯ ನಾಯಕರಾದ ಸುರೇಶ್ ಹೆಗ್ಡೆ,ಬ್ಯಾಂಕ್ ನೌಕರರ ಸಂಘಟನೆಯ ರಾಜ್ಯ ನಾಯಕರಾದ ಕೆ ಫಣೀಂದ್ರ, AITUC ಜಿಲ್ಲಾ ನಾಯಕರಾದ ಸುರೇಶ್ ಕುಮಾರ್ ರವರು ಮಾತನಾಡಿ,NDA ನೇತ್ರತ್ವದ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿವರಿಸುತ್ತಾ ಕಾರ್ಪೊರೇಟ್ ಕಂಪನಿಗಳ ಹಿತ ಕಾಯುವ ಸರಕಾರದ ವಿರುದ್ಧ ಪ್ರಬಲ ಜನಾಂದೋಲನ ಬೆಳೆದು ಬರಬೇಕೆಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ CITU ಜಿಲ್ಲಾ ನಾಯಕರಾದ ಸುಕುಮಾರ್ ತೊಕ್ಕೋಟ್ಟು, ಜಯಂತ ನಾಯಕ್, ನೋಣಯ್ಯ ಗೌಡ,ಬಿ ಕೆ ಇನ್ತಿಯಾಜ್, ಚಂದ್ರಹಾಸ, ರಾಧಾ ಮೂಡಬಿದ್ರೆ, ಲೋಲಾಕ್ಷಿ, ಸುಂದರ ಕುಂಪಲ,ಭಾರತಿ ಬೋಳಾರ,ಜಯಲಕ್ಷ್ಮಿ, ರೋಹಿದಾಸ್,ವಿಲಾಸಿನಿ, ಕ್ರಷ್ಣಪ್ಪ,ಲಕ್ಷ್ಮೀ,AITUC ಜಿಲ್ಲಾ ನಾಯಕರಾದ ಬಿ ಶೇಖರ್, ವಿ ,ಕರುಣಾಕರ್, ಪುಷ್ಪಾರಾಜ್ ಬೋಳೂರು, ಪ್ರವೀಣ್ ಕುಮಾರ್, ಸುಲೋಚನಾ, ಕುಸುಮ,ರೈತ ನಾಯಕರಾದ ಸದಾಶಿವದಾಸ್, ಯುವಜನ ಮುಖಂಡರಾದ ನವೀನ್ ಕೊಂಚಾಡಿ,ರಿಜ್ವಾನ್ ಹರೇಕಳ,ಜಗದೀಶ್ ಬಜಾಲ್ ಮುಂತಾದವರು ಉಪಸ್ಥಿತರಿದ್ದರು. ಕಾನೂನು

ಇದನ್ನು ನೋಡಿ : ದುಃಖ ಆರದ ನೆಲದಲ್ಲಿ |ಶೋಷಿತರ ಒಡಲಾಳದ ನೋವನ್ನು ತೆರೆದಿಡುವ ಪುಸ್ತಕ – ಡಾ. ಕೆ.ಪಿ ಅಶ್ವಿನಿ

Donate Janashakthi Media

Leave a Reply

Your email address will not be published. Required fields are marked *