ಮಹಾಲಕ್ಷ್ಮೀ ಕೊಲೆ ಪ್ರಕರಣ: ಹಲವರ ಬೆರಳಚ್ಚು ಗುರುತು ಪತ್ತೆ

ಬೆಂಗಳೂರು: ವೈಯಾಲಿಕಾವಲ್‌ ನಿವಾಸಿ ಮಹಾಲಕ್ಷ್ಮೀ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಹಲವು ತಂಡುಗಳನ್ನು ರಚಿಸಿಕೊಂಡು ಹುಡುಕಾಟ ನಡೆಸಿದ್ದಾರೆ. ಆರೋಪಿಯ ಪತ್ತೆಗೆ ಪೊಲೀಸರು ಹೊರ ರಾಜ್ಯಗಳಲ್ಲಿ ಹುಡುಕಾಟ ನಡೆಸುತ್ತಿರುವಾಗಲೇ ಹಲವು ವಿಚಾರಗಳು ಬಹಿರಂಗಗೊಂಡಿವೆ. ಪ್ರಕರಣ

ಆರೋಪಿ ಮಹಾಲಕ್ಷ್ಮೀಯನ್ನು 50 ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿ ಇಟ್ಟು ಪರಾರಿಯಾಗಿದ್ದಾನೆ. ಕೊಲೆಯಾದ ಮಹಾಲಕ್ಷ್ಮೀ ಮನೆಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಆರೋಪಿಯ ಗುರುತಿಗಾಗಿ ಶೋಧ ನಡೆಸಿದಾಗ ಹಲವರ ಬೆರಳಚ್ಚು ಗುರುತು ಪತ್ತೆಯಾಗಿವೆ. ಈ ಮೂಲಕ, ಮಹಾಲಕ್ಷ್ಮೀಯನ್ನು ಹಲವರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂಬ ಅನುಮಾನ ಪೊಲೀಸರಿಗೆ ಮೂಡಿದೆ. ಪ್ರಕರಣ

ಈ ನಡುವೆ ಮಹಾಲಕ್ಷ್ಮಿಯ ತಾಯಿ ಮೀನಾ ಕೊಟ್ಟಿರುವ ದೂರಿನಲ್ಲಿ ಹಲವು ಸಂಗತಿಗಳು ಬಯಲಾಗಿವೆ. ಮೀನಾ ಗೆ ನಾಲ್ವರು ಮಕ್ಕಳು. ಈ ಪೈಕಿ ಮೊದಲ ಮಗಳು ಲಕ್ಷ್ಮೀ. ಲಕ್ಷ್ಮೀ, ಸೈಯದ್ ಇಮ್ರಾನ್ ಎಂಬುವುರ ಜೊತೆ ಲವ್ ಮ್ಯಾರೇಜ್ ಆಗಿದ್ದು, ಶಾಹೀದಾ ಬುಷುರ ಅಂತ ಹೆಸರು ಬದಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹೊರ ಗುತ್ತಿಗೆ ನೇಮಕಾತಿ ಏಜೆನ್ಸಿ ಬದಲಾಗಿ ವಿವಿಧೋದ್ದೇಶ ಸಹಕಾರ ಸಂಘ

ಕೊಲೆಯಾದ ಈ ಮಹಾಲಕ್ಷ್ಮೀ ಎರಡನೇ ಮಗಳು. ಹೇಮಂತ್ ದಾಸ್ ಎಂಬುವುರ ಜೊತೆ ಅರೇಂಜ್ಡ್​ ಮ್ಯಾರೆಜ್​ ಆಗಿದ್ದರು. ಮೂರನೇಯವನು ಮಗ ಉಕ್ಕುಂ ಸಿಂಗ್, ಡೆಲಿವರಿ ಬಾಯ್ ಆಗಿದ್ದಾರೆ. ನಾಲ್ಕನೆಯವನು ನರೇಶ್, ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಮಹಾಲಕ್ಷ್ಮೀ ಕಳೆದ ಒಂಬತ್ತು ತಿಂಗಳಿನಿಂದ ಪತಿಯಿಂದ ದೂರವಿದ್ದಳು. ಕಳೆದ ವರ್ಷ ಅಕ್ಟೋಬರ್​ನಲ್ಲಿ ವೈಯಾಲಿಕಾವಲ್​ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದಳು.

ಉಕ್ಕುಂ ಸಿಂಗ್ ಮತ್ತು ಆತನ ಪತ್ನಿ ಹಾಗೂ ಮಹಾಲಕ್ಷ್ಮೀ ಒಟ್ಟಿಗೆ ಇದ್ದರು. ಅಕ್ಕ ಮಹಾಲಕ್ಷ್ಮೀ, ತನ್ನ ಪತ್ನಿ ಜೊತೆ ಜಗಳವಾಡುತ್ತಿದ್ದಳು ಅಂತ ಉಕ್ಕುಂ ಸಿಂಗ್​ ಬೇರೆ ಮನೆಗೆ ಮಾಡಿದರು. ಹೀಗೆ ಗಂಡನ ಜೊತೆಗಿನ ಜಗಳ, ಸಹೋದರನ ಜೊತೆಗಿನ ಮುನಿಸು, ಮನೆ ಬಿಟ್ಟು ಹೋಗಿದ್ದು ಎಲ್ಲವೂ ಬಯಲಾಗಿದೆ.

ಆದರೆ, ಬೆಂಗಳೂರು ಪೊಲೀಸ್​ ಆಯುಕ್ತ ಬಿ. ದಯಾನಂದ ಅವರು ಹೇಳುವ ಪ್ರಕಾರ ಆರೋಪಿ ಹೊರ ರಾಜ್ಯದವನಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದನಂತೆ. ಆರೋಪಿ, ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಈ ಕೊಲೆ ಮಾಡಿದ್ದು ಒಬ್ಬನ್ನಾ ಅಥವಾ ಇಬ್ಬರಾ ಎಂಬವುದು ಪೊಲೀಸ್​ ತನಿಖೆಯಿಂದ ಗೊತ್ತಾಗಲಿದೆ.

ಇದನ್ನೂ ನೋಡಿ: ಬಿಜೆಪಿ ಶಾಸಕರೆಲ್ಲರೂ ಏಡ್ಸ್ ಪರೀಕ್ಷೆ ಮಾಡಿಸಿಕೊಳ್ಳಿ: ಕಾಂಗ್ರೆಸ್ ಶಾಸಕ ರಂಗನಾಥJanashakthi Media

Donate Janashakthi Media

Leave a Reply

Your email address will not be published. Required fields are marked *