ಬೆಂಗಳೂರು: ನಗರದ ವೈಯಾಲಿಕಾವಲ್ನಲ್ಲಿ ನಡೆದ ಮಹಾಲಕ್ಷ್ಮೀ ಕೊಲೆ ಪ್ರಕರಣದಲ್ಲಿ ಪ್ರಧಾನ ಶಂಕಿತ ಆರೋಪಿ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ಮಹಾಲಕ್ಷ್ಮಿಯ ದೇಹವನ್ನು ತುಂಡು ತುಂಡು ಮಾಡಿದ್ದ ರಕ್ತ ಪಿಪಾಸು ಸಾವನ್ನಪ್ಪಿದ್ದಾನೆ.
ಬೆಂಗಳೂರಿನಲ್ಲಿ 29 ವರ್ಷದ ಯುವತಿಯನ್ನು ಕೊಂದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ತುಂಬಲಾಗಿತ್ತು. ಈ ಕೃತ್ಯ ಎಸಗಿ ಊರಿಗೆ ಪರಾರಿಯಾಗಿದ್ದ ಶಂಕಿತ ಆರೋಪಿ ಒಡಿಶಾದ ಭದ್ರಕ್ ಪಟ್ಟಣದಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.
ಇದನ್ನೂ ಓದಿ: ಉರುಳಿಬಿದ್ದಿದ್ದ ಕೆಕೆಆರ್ಟಿಸಿ ಬಸ್ಸು: ಪ್ರಯಾಣಿಕರು ಅಪಾಯದಿಂದ ಪಾರು
ಸೆಪ್ಟೆಂಬರ್ 21ರಂದು 29 ವರ್ಷದ ಮಹಾಲಕ್ಷ್ಮಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ಮುಕ್ತಿ ರಂಜನ್ ರಾಯ್ (30) ಎಂಬಾತನನ್ನು ಬಂಧಿಸಲು ಕರ್ನಾಟಕ ಪೊಲೀಸರು ಒಡಿಶಾದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಆರೋಪಿ ಶವವಾಗಿ ಪತ್ತೆಯಾಗಿದ್ದಾನೆ.
ಒಡಿಶಾದ ಪಂಡಿ ಗ್ರಾಮದ ಬೂತಕಪುರದ ನಿವಾಸಿಯಾಗಿರುವ ಮುಕ್ತಿ ರಂಜನ್ ಕೊಲೆ ಬಳಿಕ ತಲೆಮರೆಸಿಕೊಂಡಿದ್ದ. ಈತನ ಬೆನ್ನು ಬಿದ್ದು ತನಿಖೆ ನಡೆಸಿದ ಪೋಲಿಸರಿಗೆ ಸದ್ಯ ಕುಳೆಪಾ ಎಂಬಲ್ಲಿ ಸ್ಮಶಾನದ ಬಳಿ ಮುಕ್ತಿ ರಂಜನ್ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಸಿಕ್ಕಿ ಬಿದ್ದಿದ್ದಾನೆ.
ಇದನ್ನೂ ನೋಡಿ: ಬಿಬಿಎಂಪಿ ನಿರ್ಲಕ್ಷ್ಯದಿಂದಾಗಿ ಬಾಲಕ ಸಾವು – ಮುಖ್ಯಮಂತ್ರಿ ಚಂದ್ರು ಆರೋಪJanashakthi Media