ವಿಧಾನಸೌಧದಲ್ಲೇ ನನ್ನ ಮೇಲೆ ಮುನಿರತ್ನ ಅತ್ಯಾಚಾರ ಮಾಡಿದ್ದಾರೆ: ಸಂತ್ರಸ್ತ ಮಹಿಳೆ ಆರೋಪ

ಬೆಂಗಳೂರು: ಒಬ್ಬ ಸಂತ್ರಸ್ತ ಮಹಿಳೆ, ವಿಧಾನಸೌಧ, ವಿಕಾಸಸೌಧದಲ್ಲೇ ನನ್ನ ಮೇಲೆ ಮುನಿರತ್ನ ಅತ್ಯಾಚಾರ ಮಾಡಿದ್ದಾರೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಸಂತ್ರಸ್ತ ಮಹಿಳೆ ಶಾಸಕ ಮುನಿರತ್ನ ವಿಧಾನಸೌಧ, ವಿಕಾಸೌಧದಲ್ಲೇ ನನ್ನ ಮೇಲೆ ಮುನಿರತ್ನ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ (ವಿಶೇಷ ತನಿಖಾ ತಂಡ ರಚನೆ ಮಾಡಿ ಆದೇಶ ಹೊರಡಿಸಿತ್ತು.ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ನಿರಂತರ ಮಳೆಯಿಂದ ಮತ್ತೆ ಉರುಳಿ ಬಿದ್ದಿ ಮಳಖೇಡ ಕೋಟೆಯ ಗೋಡೆ

ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಶಾಸಕ ಜೈಲು ಸೇರುತ್ತಿದ್ದಂತೆ ಮುನಿರತ್ನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್, ಹನಿಟ್ರ್ಯಾಪ್ ಪ್ರಕರಣ ದಾಖಲಾಗಿತ್ತು. ಜೈಲಿನಿಂದ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಮುನಿರತ್ನ ಅವರನ್ನು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು.

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದರ ನಡುವೆ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ನೋಡಿ: ಸಿಎಂ ವಿರುದ್ಧ ಎಫ್‌ಐಆರ್‌ ಸಾಧ್ಯವಿಲ್ಲ

Donate Janashakthi Media

Leave a Reply

Your email address will not be published. Required fields are marked *