ಮಾನನಷ್ಟ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್‌ಗೆ 15 ದಿನಗಳ ಜೈಲು ಶಿಕ್ಷೆ

ಮುಂಬೈ: ರಾಜ್ಯಸಭಾ ಸಂಸದ ಮತ್ತು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಮಾನನಷ್ಟ ಪ್ರಕರಣವೊಂದರಲ್ಲಿ ಅವರಿಗೆ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಬಿಜೆಪಿಯ ಮಾಜಿ ಸಂಸದ ಕಿರೀಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮುಂಬೈ ನ್ಯಾಯಾಲಯವು ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

ಮಾನನಷ್ಟಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 ರ ಅಡಿಯಲ್ಲಿ ರಾವತ್ ಅವರನ್ನು ದೋಷಿ ಎಂದು ಘೋಷಿಸಲಾಯಿತು ಮತ್ತು 15 ದಿನಗಳ ಕಾಲ ಸರಳ ಜೈಲು ಶಿಕ್ಷೆ ವಿಧಿಸಲಾಯಿತು. 25,000 ದಂಡವನ್ನೂ ವಿಧಿಸಲಾಗಿದೆ. ಬಿಜೆಪಿ ನಾಯಕನ ಪತ್ನಿ ಮೇಧಾ ಸೋಮಯ್ಯ ರಾವುತ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಮೀರಾ ಭಯಂದರ್‌ನಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣದಲ್ಲಿ 100 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ರಾವತ್ ತನ್ನ ಮತ್ತು ತನ್ನ ಪತಿ ವಿರುದ್ಧ ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ ಎಂದು ಅವರು ಹೇಳಿದರು.

ಇದನ್ನು ಓದಿ : ಉರುಳಿಬಿದ್ದಿದ್ದ ಕೆಕೆಆರ್‌ಟಿಸಿ ಬಸ್ಸು: ಪ್ರಯಾಣಿಕರು ಅಪಾಯದಿಂದ ಪಾರು

ಜನಸಾಮಾನ್ಯರ ಮುಂದೆ ನನ್ನ ವರ್ಚಸ್ಸು ಹಾಳು ಮಾಡಲು ಆರೋಪ ಮಾಡಲಾಗಿತ್ತು. ಸಂಜಯ್ ರಾವುತ್ ಅವರ ಈ ಹೇಳಿಕೆ ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಸಂಜಯ್ ವಿರುದ್ಧ ಸೇಡು ತೀರಿಸಿಕೊಂಡ ಮೇಧಾ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ರಾವುತ್ ಅವರ ವಕೀಲ ಮತ್ತು ಅವರ ಸಹೋದರ ಸುನಿಲ್ ರಾವುತ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಮತ್ತು ಆದೇಶದ ವಿರುದ್ಧ ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.

ನ್ಯಾಯಾಲಯದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಜಯ್ ರಾವತ್, ಮೇಧಾ ಅವರ ಮೇಲೆ ಆರೋಪ ಮಾಡಿದ್ದು ನಾನೊಬ್ಬನೇ ಅಲ್ಲ, ದಾಖಲೆಗಳ ಆಧಾರದ ಮೇಲೆ ಆರೋಪ ಮಾಡಿದ್ದೇನೆ. ನ್ಯಾಯಾಂಗವನ್ನು ‘ಕೇಸರಿಕರಣ’ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ನ್ಯಾಯಾಂಗದ ಮೇಲೆ ಇನ್ನೂ ನಂಬಿಕೆಯಿದ್ದು, ಶೀಘ್ರದಲ್ಲೇ ಸೆಷನ್ಸ್ ನ್ಯಾಯಾಲಯದಲ್ಲಿ ಧಾವೆ ಹೂಡುವುದಾಗಿ ಹೇಳಿದ್ದಾರೆ.

ಇದನ್ನು ನೋಡಿ : ಬಿಜೆಪಿ – ಜೆಡಿಎಸ್‌ ಸಂಚು, ಒಳಸಂಚು, ರಾಜಭವನ ದುರುಪಯೋಗ – ಇದ್ಯಾವುದಕ್ಕೂ ನಾನು ಹೆದರುವವನಲ್ಲ – ಸಿದ್ದರಾಮಯ್ಯ

Donate Janashakthi Media

Leave a Reply

Your email address will not be published. Required fields are marked *