ಚಾಮರಾಜನಗರ: ಊರ ದೇವರ ಉತ್ಸವದ ವೇಳೆ ಡಿಜೆ ಸೌಂಡ್ಸ್ಗೆ ಕುಣಿಯುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಮೂಡ್ನಾಕೂಡು ಗ್ರಾಮದಲ್ಲಿ ಬಸವೇಶ್ವರ ದೇವರ ಉತ್ಸವದ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ 42 ವರ್ಷದ ಬಾಬು ಎಂಬುವವರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಘಟನೆಯ ದೃಶ್ಯ ಸ್ಥಳದಲ್ಲಿದ್ದವರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗ್ರಾಮದಲ್ಲಿ ಗೌರಿ ವಿಸರ್ಜನೆ ಅಂಗವಾಗಿ ಕಲ್ಯಾಣ ಬಸವೇಶ್ವರ ಉತ್ಸವ ಆಯೋಜಿಸಲಾಗಿತ್ತು.
ಇದನ್ನೂ ಓದಿ: ಪ್ಯಾನ್ – ಆಧಾರ್ ಲಿಂಕ್ ಮಾಡದಿದ್ದಕ್ಕೆ ದಂಡ ಕಟ್ಟಿದ ಬಡಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು!
ಈ ರೀತಿಯ ಮೆರವಣಿಗೆ, ಹಾಗೂ ಸಮಾರಂಭಗಳಿಗೆ ಡಿಜೆ ಹಾಕುವುದನ್ನು ನಿಲ್ಲಿಸಬೇಕು ಎಂಬ ಅಭಿಪ್ರಾಯ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ನೋಡಿ: ವಚನಾನುಭವ -14 ಮಾನವನ ಮನದಲ್ಲಿ ಆಸೆ, ಅಸೂಯೆ, ಅಹಂಕಾರ ಮತ್ತು ಭಯಗಳನ್ನು ಹುಟ್ಟಿಸುವ ವಸ್ತುಗಳು ಹೇಗೆ ದೇವರಾಗಲು ಸಾಧ್ಯ