ಬೆಂಗಳೂರು: ಇಂದು, ವಿಧಾನಸೌಧದ ಮುಂಭಾಗ ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ, ಇದೆ ಅಕ್ಟೋಬರ್ 23 ರಿಂದ 25 ರವರೆಗೆ ಬೆಳಗಾವಿಯಲ್ಲಿ ಕಿತ್ತೂರು ವಿಜಯೋತ್ಸವ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಇದೇ ವೇಳೆ ಕಿತ್ತೂರು ಉತ್ಸವದ ಪೋಸ್ಟರ್ ಬಿಡುಗಡೆ ಮಾಡಿ, ಕಿತ್ತೂರು ರಾಣಿ ಚೆನ್ನಮ್ಮ ನಮಗೆಲ್ಲ ಸ್ವಾಭಿಮಾನದ ಸಂಕೇತ. ಬ್ರಿಟಿಷರು ಜಾರಿಗೆ ತಂದಿದ್ದ ತೆರಿಗೆ ನೀತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಕಿತ್ತೂರು ರಾಣಿ ಚೆನ್ನಮ್ಮ ವಿರೋಧ ಮಾಡಿದ್ದರು. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡಲ್ಲ ಅಂತ ನೇರವಾಗಿ ಹೇಳಿದರು.
ಇದನ್ನೂ ಓದಿ: ಬಾಗಿಲ ಬಳಿ ನಿಲ್ಲಬೇಡ ಎಂದಿದ್ದಕ್ಕೆ ಬಸ್ ಕಂಡಕ್ಟರ್ಗೆ ಚಾಕುವಿನಿಂದ ಇರಿದ ಪ್ರಯಾಣಿಕ
1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರೊಂದಿಗೆ ಹೋರಾಡಿ ವಿಜಯಶಾಲಿಯಾದರು. ಈ ಯದ್ಧ ನಡೆದು 200 ವರ್ಷಗಳಾಗಿವೆ. ಹೀಗಾಗಿ ವಿಜಯೋತ್ಸವ ಆಚರಣೆ ಮಾಡುತ್ತಿದ್ದೇವೆ. ಕಿತ್ತೂರು ವಿಜಯ ಜ್ಯೋತಿ ಯಾತ್ರೆ ಇಂದಿನಿಂದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಿತ್ತೂರು ತಲುಪಲಿದೆ. ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ನೆರವು ನೀಡುತ್ತಿದ್ದೇವೆ ಎಂದರು.
ಬೆಳಗಾವಿಯಲ್ಲಿ 1924ರ ಡಿಸೆಂಬರ್ 24ರಂದು ಕಾಂಗ್ರೆಸ್ ಅಧಿವೇಶ ನಡೆಯಿತು. ಇದರ ಶತಮಾನೋತ್ಸವ ಆಚರಣೆ ಮಾಡುತ್ತಿದ್ದೇವೆ. ಮೊದಲ ಶತಮಾನೋತ್ಸವ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯುತ್ತದೆ. ಸಚಿವ ಹೆಚ್.ಕೆ ಪಾಟೀಲ್ ಅವರು ಇದಕ್ಕೆ ಅಧ್ಯಕ್ಷರಾಗಿರುತ್ತಾರೆ. ಮಹಾತ್ಮ ಗಾಂಧಿಜಿಯವರು ಶಾಂತಿಯುತವಾಗಿ, ಸತ್ಯಗ್ರಹದಿಂದ ಬ್ರಿಟಿಷರನ್ನು ದೇಶದಿಂದ ಓಡಿಸಿ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಹೇಳಿದರು.
ಇದನ್ನೂ ನೋಡಿ: ವಚನಾನುಭವ -14 ಮಾನವನ ಮನದಲ್ಲಿ ಆಸೆ, ಅಸೂಯೆ, ಅಹಂಕಾರ ಮತ್ತು ಭಯಗಳನ್ನು ಹುಟ್ಟಿಸುವ ವಸ್ತುಗಳು ಹೇಗೆ ದೇವರಾಗಲು ಸಾಧ್ಯ