ಶಾಲಾ ಶುಲ್ಕ ಪಾವತಿಸಿಲ್ಲ ಎಂದು 100 ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ಕೂರಿಸಿದ ಸ್ಕೂಲ್‌ ಮ್ಯಾನೇಜರ್‌

ಉತ್ತರ ಪ್ರದೇಶ: ಸಿದ್ಧಾರ್ಥನಗರ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಸ್ಕೂಲ್‌ ಮ್ಯಾನೇಜರ್‌ ಸುಮಾರು 100 ಮುಗ್ಧ ವಿದ್ಯಾರ್ಥಿಗಳನ್ನು ಗೇಟ್‌ ಒಳಗೆ ಬರಲು ಬಿಡದೆ ಬಿಸಿಲಲ್ಲಿ ಕೂರಿಸಿದ್ದಾನೆ. ಅಷ್ಟೇ ಅಲ್ಲದೆ ವಿಡಿಯೋ ಮಾಡುವ ಮೂಲಕ ಶುಲ್ಕ ಕಟ್ಟುವಂತೆ ಒತ್ತಡ ಹೇರಿ ಮಕ್ಕಳಿಗೆ ಅವಮಾನವನ್ನೂ ಮಾಡಿದ್ದಾರೆ.

ಈ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದ್ದು, ಮ್ಯಾನೇಜರ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ಈ ಬಗ್ಗೆ ಶಾಲಾ ನಿರೀಕ್ಷಕರು ತನಿಖೆಗೆ ಆದೇಶಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍

ಈ ವಿಡಿಯೋದಲ್ಲಿ ಮಕ್ಕಳು ಶಾಲೆಗೆ ಗೇಟ್‌ ಹೊರಗಡೆ ಬಿಸಿಲಿನಲ್ಲಿ ತಲೆ ತಗ್ಗಿಸಿ ಕುಳಿತಿರುವಂತಹ ದೃಶ್ಯವನ್ನು ಕಾಣಬಹುದು. ಶುಲ್ಕವನ್ನು ಕಟ್ಟುವವರೆಗೆ ನಿಮ್ಮ ಮಕ್ಕಳನ್ನು ಶಾಲೆಯ ಗೇಟ್‌ ಒಳಗೆ ಬಿಡುವುದಿಲ್ಲ ಎಂದು ಪೋಷಕರಿಗೆ ಈಗಾಗಲೇ ತಿಳಿಸಲಾಗಿದೆ, ಆದ್ರೆ ಅವರು ಇನ್ನೂ ಫೀಸ್‌ ಕಟ್ಟಿಲ್ಲ ಅದಕ್ಕಾಗಿ ಇವರನ್ನೆಲ್ಲಾ ಹೊರ ಹಾಕಿದ್ದೇನೆ ಎಂದು ಮ್ಯಾನೇಜರ್‌ ವಿಡಿಯೋ ಮಾಡುತ್ತಾ ದರ್ಪದ ಮಾತುಗಳನ್ನಾಡಿದ್ದಾನೆ.

ಅಕ್ಟೋಬರ್‌ 1 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಶುಲ್ಕ ಪಾವತಿ ಮಾಡಲು ಸಾಧ್ಯವಾಗದಿದ್ದರೆ, ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬಹುದಿತ್ತಲ್ವಾʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಇದನ್ನೂ ನೋಡಿ: LIVE : ಶಾಸಕ ಮುನಿರತ್ನ ವಿರುದ್ಧ ಪ್ರತಿಭಟನೆ | ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಕರ್ನಾಟಕ

Donate Janashakthi Media

Leave a Reply

Your email address will not be published. Required fields are marked *