ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯನ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ದ ದೂರು ದಾಖಲು

ಬೆಂಗಳೂರು: ಮುಡಾ ಪ್ರಕರಣದಲ್ಲಿ 14 ಭೂ ನಿವೇಶನಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಲಾಗಿದೆ ಎಂದು ಆರೋಪಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಪ್ರದೀಪ್ ಕುಮಾರ್ ಹೊಸ ದೂರು ದಾಖಲಿಸಿದ್ದಾರೆ. ಪುತ್ರ

ದೂರಿನಲ್ಲಿ ಮುಖ್ಯಮಂತ್ರಿಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿದೆ. ಅವರು ಸಾಕ್ಷ್ಯ ತಿರುಚಿದ್ದಾರೆ ಎಂಬುದಾಗಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍

ಯತೀಂದ್ರ ಸಿದ್ಧರಾಮಯ್ಯ ನಿರ್ಣಾಯಕ ಪುರಾವೆಗಳನ್ನೇ ತಿರುಚಿ, ನಾಶ ಪಡಿಸಿದ್ದಾರೆ. ಇದು ಮುಡಾಗೆ ಸಂಬಂಧಿಸಿದಂತ ಭೂ ಹಗರಣದ ಮೇಲೇ ಪರಿಣಾಮ ಬೀರಲಿದೆ. ಈ ಸಂಬಂಧ ತನಿಖೆ ನಡೆಸಿ, ಇದರಲ್ಲಿ ಭಾಗಿಯಾಗಿರಿರುವಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ದೂರುದಾರರು ಸಂಪೂರ್ಣ ತನಿಖೆ ಮತ್ತು ಆರೋಪಗಳ ಬಗ್ಗೆ ಔಪಚಾರಿಕ ಪ್ರಕರಣವನ್ನು ದಾಖಲಿಸಲು ಕೋರಿದ್ದಾರೆ.

ಇದನ್ನೂ ನೋಡಿ: ಮುಡಾ ಹಗರಣ : ಸಿದ್ದರಾಮಯ್ಯ ಸರ್ಕಾರವನ್ನು ಉರುಳಿಸುವ ಪಿತೂರಿ Janashakthi Media

Donate Janashakthi Media

Leave a Reply

Your email address will not be published. Required fields are marked *