ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದಕ್ಕೆ ತಹಶೀಲ್ದಾರ್​ ದೂರು: ಸಾರ್ವಜನಿಕರು ವ್ಯಾಪಕ ಆಕ್ರೋಶ

ಕೊಪ್ಪಳ: ಕೊಪ್ಪಳ ತಾಲೂಕಿನ ಕವಲೂರು ಗ್ರಾಮದಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ 14 ಜನರ ಮೇಲೆ‌ ತಹಶೀಲ್ದಾರ್​ ದೂರು ನೀಡಿರುವ ಘಟನೆ ನಡೆದಿದ್ದು, ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಸ್ತೆ ದುರಸ್ಥಿಗೆ ಆಗ್ರಹಿಸಿ ಅಕ್ಟೋಬರ್ 1 ರಂದು ಕವಲೂರು ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಸೇರಿದಂತೆ ಎಲ್ಲರೂ ಭಾಗಿಯಾಗಿದ್ದರು. ಗ್ರಾಮದ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿತ್ತು.

ಇದನ್ನು ಓದಿ : ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯನ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ದ ದೂರು ದಾಖಲು

ಕವಲೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳು ಹದಗೆಟ್ಟಿದ್ದರಿಂದ ಬಂದ್ ನಡೆಸಿ, ಗ್ರಾಮದ ಜನ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನು ಪ್ರತಿಭಟನೆ ದಿನ, ಮನವಿ ಸ್ವೀಕರಿಸಲು ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗಲಾ, ಪಿಡ್ಲೂಡಿ ಎಇಇ ವೆಂಕಟೇಶ್ ಅವರು ಬಂದಿದ್ದರು. ಈ ಸಮಯದಲ್ಲಿ ಕೆಲವರು ಅವರ ಕಾರು ಅಡ್ಡಗಟ್ಟಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಎಂದು ತಹಶೀಲ್ದಾರ್​ ವಿಠ್ಠಲ್ ಚೌಗಲಾ ಅವರು ಕವಲಗಾ ಗ್ರಾಮದ 14 ಜನರ ವಿರುದ್ಧ ದೂರು ನೀಡಿದ್ದಾರೆ. ರಸ್ತೆ ರಿಪೇರಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸಾರ್ವಜನಿಕರ‌ ಮೇಲೆ ದೂರು ದಾಖಲಿಸಿದ ತಹಶೀಲ್ದಾರ್​ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದನ್ನು ನೋಡಿ : ಗಾಂಧಿ ಸರ್ವೋದಯ, ಅಂಬೇಡ್ಕರ್ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿದ್ದರಾಮಯ್ಯJanashakthi Media

 

Donate Janashakthi Media

Leave a Reply

Your email address will not be published. Required fields are marked *