ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ  ನವರಾತ್ರಿ ಹಬ್ಬದ ಪ್ರಯುಕ್ತ ಸಿಹಿಸುದ್ದಿ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಪ್ರತೀ ತಿಂಗಳು 2,000 ರೂ. ಅವರ ಬ್ಯಾಂಕ್ ಖಾತೆಗೆ ಜಮೆ ಮಾಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಅದರಂತೆ ಮನೆಯ ಯಜಮಾನಿಗೆ ಈ ಹಣ ಸಂದಾಯವಾಗುತ್ತದೆ. ಆದರೆ ಜುಲೈ ಮತ್ತು ಆಗಸ್ಟ್ ತಿಂಗಳ ಕಂತು ಇನ್ನೂ ಜಮೆಯಾಗಿಲ್ಲ ಎಂದು ಜನ ಆಕ್ರೋಶಗೊಂಡಿದ್ದಾರೆ.

ಇದನ್ನು ಓದಿ :50 ಕೋಟಿ ಹಣಕ್ಕೆ ಬೇಡಿಕೆ: ಕುಮಾರಸ್ವಾಮಿ ವಿರುದ್ದ ಜೆಡಿಎಸ್‌ನವರಿಂದಲೇ ದೂರು

ಇತ್ತೀಚೆಗಷ್ಟೇ ಮಾಧ್ಯಮಗಳ ಮುಂದೆ ಮಾತನಾಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಒಂದು ವಾರದಲ್ಲೇ ಹಣ ಜಮೆ ಮಾಡುವುದಾಗಿ ಹೇಳಿದ್ದರು. ಆದರೆ ಇದುವರೆಗೆ ಹಣ ಖಾತೆಗೆ ಬಂದಿಲ್ಲ ಎಂದು ಜನ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಲೇ ಇದ್ದಾರೆ. ಈ ನಡುವೆ ಇಂದು ಮಾಧ್ಯಮಗಳಿಗೆ ಈ ಬಗ್ಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಜುಲೈ ತಿಂಗಳ ಹಣ ಅಕ್ಟೋಬರ್ 7 ರಂದು ಸೋಮವಾರ ಮತ್ತು ಆಗಸ್ಟ್ ತಿಂಗಳ ಕಂತು ಅಕ್ಟೋಬರ್ 9 ರಂದು ಬುಧವಾರ ಜಮೆ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಎರಡು ದಿನಗಳಲ್ಲಿ 1ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ 4 ಸಾವಿರ ರೂ. ಜಮೆ ಆಗಲಿದೆ.

ಇದನ್ನು ನೋಡಿ : RSS ಸುಳ್ಳುಗಳನ್ನು ಹೇಗೆ ಹರಡುತ್ತದೆ ಗೊತ್ತೆ? ಈ ವಿಡಿಯೋ ನೋಡಿ

Donate Janashakthi Media

Leave a Reply

Your email address will not be published. Required fields are marked *