ಬೆಂಗಳೂರು ಮಳೆ: ನಗರದಲ್ಲಿ ರಸ್ತೆಗಳು ಹೊಳೆ; 36 ಮಿ.ಮೀ. ಮಳೆ ದಾಖಲು

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ಬಂಗಾಳಕೊಲ್ಲಿಯ ಟರ್ಫ್ ಎಫೆಕ್ಟ್​ನಿಂದ ಮಳೆಯಾಗುತ್ತಿದೆ. ಕತ್ತಲಾಗುತ್ತಿದ್ದಂತೆ ಎಂಟ್ರಿಯಾಗುವ ಮಳೆಯ ಆರ್ಭಟಕ್ಕೆ  ರಾಜಧಾನಿಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಸದ್ಯ ನಿನ್ನೆ ರಾತ್ರಿ ಸುರಿದ ಮಳೆಯಿಂದ ನಗರದಲ್ಲಿ ರಸ್ತೆಗಳು ಹೊಳೆಯಂತಾಗಿವೆ. ತಡೆಗೋಡೆ ಕುಸಿದು ಅಪಾರ್ಟ್ಮೆಂಟ್ ಒಳಗೆ ನೀರು ನುಗ್ಗಿದೆ. ನಗರದಲ್ಲಿ ಸರಾಸರಿ 36 ಮಿ.ಮೀ. ಮಳೆ ದಾಖಲಾಗಿದ್ದು, ಜನಜೀವನ ತತ್ತರಿಸಿದೆ. ಬೆಂಗಳೂರು

2 ಸಾವಿರ ನಿವಾಸಿಗಳಿಗೆ ಜಲದಿಗ್ಬಂಧನ: ಟ್ರ್ಯಾಕ್ಟರ್ ಮೂಲಕ ಶಿಫ್ಟ್

ಮಳೆಯಿಂದಾಗಿ ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್​​​​​ಮೆಂಟ್ ಜಲಾವೃತವಾಗಿದ್ದು, 603 ಫ್ಲಾಟ್​​ಗಳಿದ್ದು, 2ಸಾವಿರ ನಿವಾಸಿಗಳಿಗೆ ಜಲದಿಗ್ಬಂಧನ ಹಾಕಿತ್ತು. ಟ್ರ್ಯಾಕ್ಟರ್ ಮೂಲಕ ನಿವಾಸಿಗಳನ್ನ ಶಿಫ್ಟ್ ಮಾಡಲಾಗಿದೆ. ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್​​​​​ಮೆಂಟ್​ನಲ್ಲಿ 80 ಕ್ಕೂ ಹೆಚ್ಚು ಕಾರು, ನೂರಕ್ಕೂ ಹೆಚ್ಚು ಬೈಕ್​ಗಳು ನೀರಿನಲ್ಲಿ ಮುಳುಗಿವೆ. ಟ್ರ್ಯಾಕ್ಟರ್, ಬೋಟ್ ಮೂಲಕ ಆಹಾರ, ನೀರನ್ನ ಪೂರೈಸಲಾಗಿದೆ.

ವೃದ್ಧಾಶ್ರಮಕ್ಕೆ ನುಗ್ಗಿದ ನೀರು: ಪರದಾಟ

ಮಹಾಮಳೆಯಿಂದ ಬಸವೇಶ್ವರನಗರದಲ್ಲಿರುವ ವೃದ್ಧಾಶ್ರಮಕ್ಕೆ ನೀರು ನುಗ್ಗಿತ್ತು. ಇದರಿಂದ 15ಕ್ಕೂ ಅಧಿಕ ವೃದ್ಧರು ಪರದಾಡಿದ್ದಾರೆ. ಬಸವೇಶ್ವರ ನಗರದ 8ಬಿ ಮುಖ್ಯರಸ್ತೆ ಹೊಳೆಯಂತಾಗಿತ್ತು. ಹಾಗಾಗಿ ಫ್ಲೈವುಡ್ ಹಾಗೂ ಗ್ಲಾಸ್ ಅಂಗಡಿ ಸಂಪೂರ್ಣ ಜಲಾವೃತವಾಗಿತ್ತು.

ಇದನ್ನೂ ಓದಿ: ನವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದಿರುಗುತ್ತಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಗುಜರಾತಿನಲ್ಲಿ ಘಟನೆ

ಕುಸಿದ ಕಾಂಪೌಂಡ್ ಗೋಡೆ

ಬಿನ್ನಿಪೇಟೆಯಲ್ಲೂ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಬಿನ್ನಿ ಇಟಾ ಮಾಲ್ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದಿದೆ. ಇದರಿಂದ ವಿದ್ಯುತ್ ಕಂಬ ವಾಲಿದ್ದು, 15 ಮನೆ ನಿವಾಸಿಗಳು ಹೊರಗೆ ಬಾರದ ಸ್ಥಿತಿಯಲ್ಲಿ ಸಿಲುಕಿದರು. ಹತ್ತುಕ್ಕೂ ಹೆಚ್ಚು ಬೈಕ್​​ಗಳು ಜಖಂ ಆಗಿವೆ. ಅದೇ ರೀತಿಯಾಗಿ ಯಲಹಂಕದ ಅಟ್ಟೂರಿನಲ್ಲಿ ಮಳೆ ಅಬ್ಬರಿಸಿದೆ. ಮನೆಗಳಲ್ಲಿನ ಗೃಹೋಪಯೋಗಿ ವಸ್ತುಗಳು ನೀರು ಪಾಲಾಗಿವೆ. ನೀರನ್ನ ಹೊರ ಹಾಕಲು ಕುಟುಂಬದವರು ರಾತ್ರಿಯಿಡಿ ಜಾಗರಣೆ ಮಾಡಿದ್ದಾರೆ.

ಟಿ. ದಾಸರಹಳ್ಳಿಯ ಮಹೇಶ್ವರಿನಗರದಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ದಿನಸಿ, ಬಟ್ಟೆ ನೀರುಪಾಲಾಗಿವೆ. ವರುಣಾರ್ಭಟಕ್ಕೆ ಬೆಂಗಳೂರು-ಹೊಸೂರು ಹೆದ್ದಾರಿ ಕೆರೆಯಂತಾಗಿದೆ. ನೀರಲ್ಲಿ ಸಿಲುಕಿ ಕಾರು ಚಾಲಕ ಪರದಾಡಿದ್ದಾರೆ. ರಸ್ತೆ ಜಲಾವೃತವಾಗಿದ್ರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಮಳೆಗೆ ಸರ್ಜಾಪುರ ಮುಖ್ಯರಸ್ತೆ ಕೆರೆಯಂತಾಗಿದೆ. ರಸ್ತೆಯಲ್ಲಿ ನೀರು ನಿಂತು ಜನ ಪರದಾಡ್ತಿದ್ದಾರೆ. ರೈಲ್ವೆ ಟ್ರ್ಯಾಕ್​ಗೆ ನೀರು ಬರುತ್ತೆ ಅಂತ ರೈಲ್ವೇ ಇಲಾಖೆ ನೀರು ಹರಿಯುವ ಜಾಗ ಮುಚ್ಚಿದ್ದು ಫಜೀತಿ ತಂದಿದೆ.  ರಾಜಾಜಿನಗರದಲ್ಲೂ ಮಳೆ ಧಾರಾಕಾರವಾಗಿ ಸುರಿಯಿತ್ತು. ಮಂಜುನಾಥನಗರದಲ್ಲಿ ಹತ್ತಾರು ಬೈಕ್​ಗಳು ಮುಳುಗಡೆಯಾಗಿದ್ವು. ರಸ್ತೆ ಬದಿ ಅಂಗಡಿಗಳಿಗೂ ಮಳೆ ನೀರು ನುಗ್ಗಿ ನಿವಾಸಿಗಳು ಪರದಾಡಿದ್ದಾರೆ.

ಯಾವ್ಯಾವ ಭಾಗದಲ್ಲಿ ಎಷ್ಟು ಮಳೆ?

  • ಕೊಟ್ಟೆಗೆಪಾಳ್ಯ ; 113 ಮಿ.ಮೀ
  • ಹಂಪಿನಗರ : 108 ಮಿ.ಮೀ
  • ನಾಗಪುರ : 107.5 ಮಿ.ಮೀ
  • ಚೌಡೇಶ್ವರಿ : 79.5 ಮಿ.ಮೀ
  • ಮಾರುತಿಮಂದಿರ : 75.5 ಮಿ.ಮೀ
  • ನಂದಿನಿ ಲೇಔಟ್ : 71.5 ಮಿ.ಮೀ
  • ರಾಜಾಜಿನಗರ : 59 ಮಿ.ಮೀ
  • ನಾಯಂಡಹಳ್ಳಿ : 46 ಮಿ.ಮೀ
  • HAL ಏರ್ಪೋರ್ಟ್ : 45 ಮಿ.ಮೀ
  • ವಿದ್ಯಾರಣ್ಯಪುರ : 45 ಮಿ.ಮೀ
  • ಪುಟ್ಟೇನಹಳ್ಳಿ : 42.5 ಮಿ.ಮೀ
  • RR ನಗರ : 42.5 ಮಿ.ಮೀ
  • ರಾಜಮಹಲ್ ಗುಟ್ಟಹಳ್ಳಿ : 42.5 ಮಿ.ಮೀ
  • ಸೇರಿದಂತೆ ಸರಾಸರಿ 36 ಮಿ.ಮೀ ಮಳೆ ದಾಖಲು

ಇದನ್ನೂ ನೋಡಿ: ಪ್ಯಾಲೆಸ್ಟೀನ್‌ ಪರವಾಗಿ ಧ್ವನಿಯೆತ್ತುವುದು ಅಪರಾಧವೇ? ಪ್ರತಿಭಟನೆಕಾರರ ಪ್ರಶ್ನೆ Janashakthi Media

Donate Janashakthi Media

Leave a Reply

Your email address will not be published. Required fields are marked *