ಪ್ರಾಣಿಗಳ ಕೊಬ್ಬು ಸಂಸ್ಕರಣಾ‍ ಘಟಕದಲ್ಲಿ ಸ್ಫೋಟ; ಓರ್ವ ಕಾರ್ಮಿಕ ಸಾವು

ಕೊಚ್ಚಿ: ಕೇರಳದ ಎರ್ನಾಕುಲಂ ಜಿಲ್ಲೆಯ ಪ್ರಾಣಿಗಳ ಕೊಬ್ಬು ಸಂಸ್ಕರಣಾ‍ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಒಡಿಶಾ ಮೂಲದ ಅಜಯ್‌ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಗ್ಯಾಸ್‌ ಸಿಲಿಂಡರ್‌ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಆದರೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದಿರುಗುತ್ತಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಗುಜರಾತಿನಲ್ಲಿ ಘಟನೆ

ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ನೋಡಿ: ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು – ಸಚಿವ ದಿನೇಶ್‌ ಗುಂಡೂರಾವ್‌

Donate Janashakthi Media

Leave a Reply

Your email address will not be published. Required fields are marked *