ಶಿಕ್ಷಣ ಇಲಾಖೆ: ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಆದೇಶ

ಬೆಂಗಳೂರು: ಶಿಕ್ಷಣ ಇಲಾಖೆಯು ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ನೀಡಿದ್ದ ಭರವಸೆಯಂತೆ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ.

ನೇರ ನೇಮಕಾತಿ 1 ರಿಂದ 5ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ 4,424 ಹುದ್ದೆಗಳು, 6 ರಿಂದ 8ನೇ ತರಗತಿಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 78 ಹುದ್ದೆಗಳು ಹಾಗೂ 380 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಸೇರಿ ಒಟ್ಟು 5,267 ಹುದ್ದೆಗಳಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕಲ್ಯಾ ಣ ಕರ್ನಾಟಕ ಪ್ರದೇಶದ ಶಾಲೆಗಳಿಗೆ ಮಂಜೂರಾದ ಒಟ್ಟು ಹುದ್ದೆಗಳಲ್ಲಿ ಸದ್ಯ 6,584 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಆ ಪೈಕಿ ಮೊದಲ ಹಂತದಲ್ಲಿ ಶೇ. 80ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಮಾಡಲಾಗುತ್ತದೆ.

ಇದನ್ನೂ ಓದಿ: ಮಾನವಹಕ್ಕು ಹೋರಾಟಗಾರ ಪ್ರೊ. ಜಿ.ಎನ್. ಸಾಯಿಬಾಬಾ ನಿಧನ

ನೇಮಕಾತಿಗೆ ಪೂರ್ವ ಪ್ರಕ್ರಿಯೆಗಳು ಮುಕ್ತಾಯಗೊಂಡ ನಂತರ ಮತ್ತು ನೇಮಕಾತಿ ಆದೇಶ ನೀಡುವ ಮೊದಲು ಈ ಹುದ್ದೆಗಳಿಗೆ ತಗುಲಬಹುದಾದ ಆರ್ಥಿಕ ಆಯವ್ಯಯ ಅಂದಾಜು ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸಲು ಆರ್ಥಿಕ ಇಲಾಖೆಗೆ ಸರ್ಕಾರ ಸೂಚಿಸಿದೆ.

ವಿದ್ಯಾರ್ಹತೆ ಏನು?

ಪ್ರಾಥಮಿಕ ಶಾಲಾ ಶಿಕ್ಷಕರು (1-5ನೇ ತರಗತಿವರೆಗೆ): ಡಿ.ಇಡಿ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (6-8ನೇ ತರಗತಿ): ಪದವಿ ಜತೆಗೆ ಬಿ.ಇಡಿ.
ಫಿಸಿಕಲ್ ಎಜುಕೇಷನ್ ಟೀಚರ್ (ಗ್ರೇಡ್-2): ಪದವಿ ಜತೆಗೆ ಬಿಪಿ.ಇಡಿ.

ಪ್ರಸ್ತುತ ನೇಮಕಾತಿಗೆ ಆದೇಶ ನೀಡಿದ್ದು, ಇದರ ಕುರಿತು ಮುಂದಿನ ದಿನಗಳಲ್ಲಿ ಕರಡು ಅಧಿಸೂಚನೆ ಪ್ರಕಟವಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ನಡೆಯಲಿದೆ.

“2024-25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6,584 ಶಿಕ್ಷಕರ ಹುದ್ದೆಗಳ ಪೈಕಿ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಸ್ತಾವನೆ ಸಲ್ಲಿಸಿದ್ದರು. ಇದೀಗ ಈ ಪ್ರಸ್ತಾವನೆಗೆ ಸರ್ಕಾರವು ಅನುಮತಿ ನೀಡಿದೆ” ಎಂದು ಮೂಲಗಳು ತಿಳಿಸಿವೆ.

ಇದನ್ನೂ ನೋಡಿ: ICDS -50| ‘Strengthen anganwadis to tackle malnutrition – S. Muralidhar | Janashakthi Media

Donate Janashakthi Media

Leave a Reply

Your email address will not be published. Required fields are marked *