ವಾಲ್ಮೀಕಿ ಅಭಿವೃದ್ದಿ ಹಗರಣ: ಮಾಜಿ ಸಚಿವ ಬಿ ನಾಗೇಂದ್ರ ಗೆ ಜಾಮೀನು ಮಂಜೂರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರಗೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮೂರು ತಿಂಗಳ ಬಳಿಕ ಸಚಿವ ಬಿ ನಾಗೇಂದ್ರ ಗೆ ಕೋರ್ಟ್ ಜಾಮೀನು ನೀಡಿದೆ.

ಮಾಜಿ ಸಚಿವ ಗೆ 82ನೇ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬಿ. ನಾಗೇಂದ್ರ ರನ್ನು ಬಂಧಿಸಿದ್ದರು.

ಇದನ್ನೂ ಓದಿ: ನೀವು ಕಾನೂನಿನ ಪಾಠ ಹೇಳುವುದು ಕಳ್ಳನೊಬ್ಬ ಸತ್ಸಂಗದಲ್ಲಿ ಪ್ರವಚನ ನೀಡಿದಂತೆ ಭಾಸವಾಗುತ್ತದೆ! ಪ್ರಿಯಾಂಕ್‌ ಖರ್ಗೆ

ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಒಂದು ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಇಡಿ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿ ಕೋರ್ಟಿಗೆ ಸಲ್ಲಿಸಿದರು.

ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಇಡಿ ಅಧಿಕಾರಿಗಳು ಇತ್ತೀಚಿಗೆ ಸಚಿವ ಬಿ ನಾಗೇಂದ್ರ ಸೇರಿದಂತೆ ಈ ಒಂದು ಪ್ರಕರಣದಲ್ಲಿ ಭಾಗಿಯಾದಂತಹ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಕೂಡ ಸಲ್ಲಿಸಿದ್ದರು. ಆದರೆ ಇಂದು ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಲಯವು ಮಾಜಿ ಸಚಿವ ಬಿ ನಾಗೇಂದ್ರಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.

ಇದನ್ನೂ ನೋಡಿ: ICDS -50| ‘Strengthen anganwadis to tackle malnutrition – S. Muralidhar | Janashakthi Media

Donate Janashakthi Media

Leave a Reply

Your email address will not be published. Required fields are marked *