ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ: ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗ

ನನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗವು ಇದೀಗಾ ಪ್ರಕಟಿಸಿದೆ.

ಮಹಾರಾಷ್ಟ್ರ ಚುನಾವಣೆಯು ಒಂದೇ ಹಂತದಲ್ಲಿ ನವೆಂಬರ್‌ 20 ರಂದು ನಡೆಯಲಿದೆ. ಜಾರ್ಖಂಡ್‌ ವಿಧಾನಸಭೆ ಚುನಾವಣೆಯು ಎರಡು ಹಂತಗಳಲ್ಲಿ 13 ಹಾಗೂ ನವೆಂಬರ್‌ 20 ರಂದು ನಡೆಯಲಿದೆ. ಎರಡೂ ರಾಜ್ಯಗಳ ಮತ ಎಣಿಕೆ ನವೆಂಬರ್‌ 23 ರಂದು ನಡೆಯಲಿದೆ.

ಇದನ್ನು ಓದಿ : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ: ಇಲ್ಲಿದೆ ಮಾಹಿತಿ

ಮಹಾರಾಷ್ಟ್ರದಲ್ಲಿ 9.63 ಕೋಟಿ ಮತದಾರರಿದ್ದರೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 1,00,186 ಮತದಾನ ಕೇಂದ್ರಗಳಿವೆ. ಜಾರ್ಖಂಡ್‌ನಲ್ಲಿ 2.6 ಕೋಟಿ ಮತದಾರರಿದ್ದು, 29,562 ಮತಗಟ್ಟೆಗಳಿವೆ. ವಿವಿಧ ರಾಜ್ಯಗಳ 48 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನ.13 ರಂದು ಹಾಗೂ 2 ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ನ.20 ಎಂದು ನಡೆಯಲಿದೆ. ಇದರಲ್ಲಿ ಕರ್ನಾಟಕದ ಮೂರು ವಿಧಾನಸಭಾ ಚುನಾವಣೆ ಕೂಡ ಸೇರಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ 288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆಯ ಅಧಿಕಾರಾವಧಿಯು ಈ ವರ್ಷದ ನವೆಂಬರ್‌ನಲ್ಲಿ ಕೊನೆಗೊಳ್ಳುತ್ತಿದ್ದರೆ, 81 ಸದಸ್ಯರ ಜಾರ್ಖಂಡ್ ವಿಧಾನಸಭೆಯ ಅಧಿಕಾರಾವಧಿಯು ಜನವರಿ 5, 2025 ರಂದು ಕೊನೆಗೊಳ್ಳಲಿದೆ. ಸದ್ಯ ಮಹಾರಾಷ್ಟ್ರದಲ್ಲಿ ಬಿಜೆಪಿ – ಏಕನಾಥ್‌ ಶಿಂದೆ ನೇತೃತ್ವದ ಸರ್ಕಾರವಿದ್ದರೆ, ಜಾರ್ಖಂಡ್‌ನಲ್ಲಿ ಜೆಎಂಎಂ ಸರ್ಕಾರ ಅಸ್ತಿತ್ವದಲ್ಲಿದೆ.

ಇದನ್ನು ನೋಡಿ : ಸಾಹಿತ್ಯ ಸಮ್ಮೇಳನ – ರಾಜಕೀಯ ಹಸ್ತಕ್ಷೇಪ ಆಗದಿರಲಿ – ಡಾ. ಬಂಜಗೆರೆ ಜಯಪ್ರಕಾಶ್ Janashakthi Media

Donate Janashakthi Media

Leave a Reply

Your email address will not be published. Required fields are marked *