ಶಾಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಶಿಕ್ಷಕ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಪ್ರೌಢಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಶಾಲೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗಜಾನನ ಹಿರೇಮಠ ಮೃತ ಶಿಕ್ಷಕ. ಚಿತ್ರಕಲಾ ಶಿಕ್ಷಕರಾಗಿದ್ದ ಗಜಾನನ ಹಿರೇಮಠ, ಎಂದಿನಂತೆ ವಿದ್ಯಾರ್ಥಿಗಳಿಗೆ ವಾಲಿಬಾಲ್ ಆಟದ ಬಗ್ಗೆ ತರಬೇತಿ ನೀಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ.

ಇದನ್ನೂ ಓದಿ: ನಕಲಿ ಮದ್ಯ ಸೇವಿಸಿ 5 ಜನ ಸಾವು

ತಕ್ಷಣ ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿಕ್ಷಕ ಗಜಾನನ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಮೆಚ್ಚಿನ ಶಿಕ್ಷಕನ ಅಗಲಿಕೆಗೆ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.

ಇದನ್ನೂ ನೋಡಿ: ಐಸಿಡಿಎಸ್‌ ಯೋಜನೆಗೆ ಹಣ ಕಡಿತ : Janashakthi Media

Donate Janashakthi Media

Leave a Reply

Your email address will not be published. Required fields are marked *