ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ವಿರುದ್ಧ ಅರ್ಜಿ ಚರ್ಚೆ ವೇಳೆ ತೀವ್ರ ವಾದ-ವಿವಾದ

ನವದೆಹಲಿ :ಮಂಗಳವಾರ ಸುಪ್ರೀಂ ಕೋರ್ಟ್‌ ಪೀಠ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ವಿರುದ್ಧ ಅರ್ಜಿ ಸಲ್ಲಿಸಿದ್ದ ವಕೀಲರ  ನಡುವೆ  ತೀವ್ರ ವಾದ-ವಿವಾದ ನಡೆಯಿತು.

ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರು ಅರ್ಜಿದಾರನನ್ನು ನ್ಯಾಯಾಲಯದ ಕೊಠಡಿಯಿಂದ ಹೊರಗೆ ಕಳುಹಿಸುವಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಿದ ಪ್ರಸಂಗವೂ ನಡೆಯಿತು.

ಸೇವಾ ತಕರಾರಿಗೆ ಸಂಬಂಧಿಸಿದ ಅರ್ಜಿಯೊಂದನ್ನು ವಜಾಗೊಳಿಸಿದ್ದಕ್ಕಾಗಿ ಗೊಗೊಯಿ ವಿರುದ್ಧ ಆಂತರಿಕ ವಿಚಾರಣೆಗೆ ಆದೇಶಿಸುವಂತೆ ಕೋರಿ ಅರುಣ್ ರಾಮಚಂದ್ರ ಹುಬ್ಬಿಕರ್ ಎಂಬವರು ಪಿಐಎಲ್ ಸಲ್ಲಿಸಿದ್ದರು. ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ಪ್ರತಿವಾದಿಯನ್ನಾಗಿಸಿ ಪಿಐಎಲ್ ಸಲ್ಲಿಸಿದ್ದಕ್ಕೆ ಸುಪ್ರೀಂಕೋರ್ಟ್ ಈ ಹಿಂದೆ ಅಸಮಾಧಾನ ಹೊರಹಾಕಿತ್ತು.

ಇದನ್ನು ಓದಿ : ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

‘ನ್ಯಾಯಮೂರ್ತಿಯೊಬ್ಬರನ್ನು ಪ್ರತಿವಾದಿಯನ್ನಾಗಿಸಿ ನೀವು ಪಿಐಎಲ್ ಸಲ್ಲಿಸಿದ್ದು ಹೇಗೆ’ ಎಂದು ಸುಪ್ರೀಂ ಕೋರ್ಟ್ ಪೀಠ, ಸೆಪ್ಟೆಂಬರ್ 30ರಂದು ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿತ್ತು.
ಮಂಗಳವಾರದ ವಿಚಾರಣೆ ವೇಳೆ ಹುಬ್ಬಿಕರ್ ಅವರು, ಮತ್ತೆ ಗೊಗೊಯಿ ಹೆಸರನ್ನು ಪುಸ್ತಾಪಿಸಿದರು. ಅದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ನಿಮ್ಮ ಮೇಲೆ ದಂಡ ವಿಧಿಸುತ್ತೇವೆ. ಯಾವುದೇ ನ್ಯಾಯಾಧೀಶರ ಹೆಸರು ಪ್ರಸ್ತಾಪಿಸಬೇಡಿ. ನಿಮ್ಮ ಅರ್ಜಿಯಲ್ಲಿ ಏನೂ ಇಲ್ಲ’ ಎಂದಿತು.

ಅದಕ್ಕೆ ಅರ್ಜಿದಾರ, ‘ನನ್ನ ಪ್ರಕರಣದಲ್ಲಿ ಏನೂ ಇಲ್ಲ ಎಂದು ನೀವು ಹೇಗೆ ಹೇಳುತ್ತೀರಿ. ನನಗೆ ಅನ್ಯಾಯವಾಗಿದೆ. ಕನಿಷ್ಠ ಸಾವಿಗೆ ಮುನ್ನವಾದರೂ ನನಗೆ ನ್ಯಾಯ ಸಿಗಬೇಕು’ ಎಂದು ವಾದಿಸಿದರು.
ನಿಮ್ಮ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಹೇಳಿದ ಪೀಠ, ಅರ್ಜಿದಾರರನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುವಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಿತು.

ಗೊಗೊಯಿ ಅವರ ಹೆಸರನ್ನು ಪ್ರತಿವಾದಿಗಳ ಪಟ್ಟಿಯಿಂದ ಕೈಬಿಡುವಂತೆ ಅರ್ಜಿದಾರರಿಗೆ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ಈ ಹಿಂದೆ ಸೂಚಿಸಿತ್ತು.

ಇದನ್ನು ನೋಡಿ : ವಾರದ ನೋಟ | ಭಾರತದಲ್ಲಿ ಜಿಡಿಪಿ ಹೆಚ್ಚಾದರೆ ನಿರುದ್ಯೋಗವೂ ಹೆಚ್ಚಾಗುತ್ತಿರುವ ಪವಾಡದ ವಿವರಗಳೇನು? Janashakthi Media

Donate Janashakthi Media

Leave a Reply

Your email address will not be published. Required fields are marked *